ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳಬಾಗಿಲು | ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಪ್ರಚಾರ

Published 19 ಮೇ 2024, 13:34 IST
Last Updated 19 ಮೇ 2024, 13:34 IST
ಅಕ್ಷರ ಗಾತ್ರ

ಮುಳಬಾಗಿಲು: ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರವಾಗಿ ಶನಿವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಮುಳಬಾಗಿಲು ನಗರದಲ್ಲಿ ಮತ ಪ್ರಚಾರ ನಡೆಯಿತು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವಿ.ರಾಮ್ ಪ್ರಸಾದ್, ಪ್ರಚಾರದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹಾಗೂ ಅಭಿವೃದ್ಧಿ ಯೋಜನೆಗಳು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಡಿ.ಟಿ.ಶ್ರೀನಿವಾಸ್ ನಿವೃತ್ತ ಕೆ.ಎ.ಎಸ್ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡುವ ಮೂಲಕ ಗುರುತಿಸಿಕೊಂಡಿದ್ದಾರೆ ಎಂದರು.

ಕಿಸಾನ್ ಖೇತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಗೌಡ, ಕೆಪಿಸಿಸಿ ಎಸ್‌.ಸಿ ಬ್ಲಾಕ್ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಮಾರಪ್ಪ, ಅಶೋಕ್, ಶಂಕರ ರೆಡ್ಡಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT