ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ

Last Updated 16 ಜುಲೈ 2021, 17:21 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಾದ್ಯಂತ ಕಳೆದೊಂದು ವಾರದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು, ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ದಾಖಲೆಯ 44.3 ಮಿ.ಮೀ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಕೆರೆ, ಕುಂಟೆಗಳು, ಹಳ್ಳಗಳು ಭರ್ತಿಯಾಗುತ್ತಿವೆ. 2021ರ ಜ.1ರಿಂದ ಜುಲೈ 15ರವರೆಗೆ ವಾಡಿಕೆ ಮಳೆ ಪ್ರಮಾಣ 214.2 ಮಿ.ಮೀ ಇದೆ. ಆದರೆ, ಈಗ ಈ ಅವಧಿಯಲ್ಲಿ 340.1 ಮಿ.ಮೀ ಮಳೆ ಸುರಿದಿದ್ದು, ವಾಡಿಕೆಗಿಂತ 125 ಮಿ.ಮೀ ಮಳೆ ಹೆಚ್ಚು ಮಳೆಯಾಗಿದೆ ಎಂದು ಹೇಳಿದ್ದಾರೆ.

ಮಳೆಗಾಲ ಆರಂಭದ ಜೂನ್ 1ರಿಂದ ಜುಲೈ 15ರವರೆಗೆ ವಾಡಿಕೆ ಮಳೆ ಪ್ರಮಾಣ 97 ಮಿ.ಮೀ ಇದ್ದು, ಈಗ ಈ ಅವಧಿಯಲ್ಲಿ 180.5 ಮಿ.ಮೀ ಮಳೆ ಸುರಿದಿದೆ. ಜುಲೈ 1ರಿಂದ 15 ರವರೆಗೆ ವಾಡಿಕೆ ಮಳೆ ಪ್ರಮಾಣ 31.5 ಮಿ.ಮೀ ಇದ್ದು, ಈಗ 107.4 ಮಿ.ಮೀ ಮಳೆಯಾಗಿದೆ. ಒಟ್ಟಾರೆ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ ಎಂದು ಮಾಹಿತಿ ನೀಡಿದ್ದಾರೆ.

ಕೋಲಾರ, ಮಾಲೂರು, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದ ಮುಂಗಾರು ಬೆಳೆಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 5 ದಿನ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಳೆ ಮುಂದುವರಿದರೆ ಬೆಳೆಗಳ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ, ಬೆಳೆಗಳಲ್ಲಿ ರೋಗ ಮತ್ತು ಕೀಟ ಹಾವಳಿ ಹೆಚ್ಚಾಗುತ್ತದೆ. ಇದರಿಂದ ಇಳುವರಿ ಕಡಿಮೆಯಾಗುವ ಸಾಧ್ಯತೆಯಿದೆ. ರೈತರು ಬಿತ್ತನೆ, ಗೊಬ್ಬರ ಹಾಕುವುದು ಮತ್ತು ಕೀಟನಾಶಕ ಸಿಂಪಡಣೆ ಕಾರ್ಯ ಮುಂದೂಡಬೇಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT