ಭಾನುವಾರ, ಏಪ್ರಿಲ್ 2, 2023
31 °C

ಕೋಲಾರ: ಕೌಟುಂಬಿಕ ಕಲಹದ ಕಾರಣಕ್ಕೆ ಮಗು ಕೊಂದು ತಾಯಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕೌಟುಂಬಿಕ ಕಲಹದ ಕಾರಣಕ್ಕೆ ತಾಲ್ಲೂಕಿನ ಚಿನ್ನಾಪುರ ಗ್ರಾಮದಲ್ಲಿ ಮಹಿಳೆಯೊಬ್ಬರು ಬುಧವಾರ ರಾತ್ರಿ ಮಗುವನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ನಿವಾಸಿ ಹರೀಶ್‌ ಅವರ ಪತ್ನಿ ಭಾನುಪ್ರಿಯಾ (22) ಮತ್ತು 2 ವರ್ಷದ ಹೆಣ್ಣು ಮಗು ನಿಧಿ ಮೃತಪಟ್ಟವರು. ಪದವೀಧರೆಯಾದ ಭಾನುಪ್ರಿಯಾ 3 ವರ್ಷಗಳ ಹಿಂದೆ ಹರೀಶ್‌ರನ್ನು ವಿವಾಹವಾಗಿದ್ದರು. ಹರೀಶ್‌, ನರಸಾಪುರ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಾರೆ.

ಪರ ಸ್ತ್ರೀ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಹರೀಶ್‌ ಪ್ರತಿನಿತ್ಯ ಮನೆಯಲ್ಲಿ ಪತ್ನಿಯ ಜತೆ ಜಗಳವಾಡುತ್ತಿದ್ದರು. ಅಲ್ಲದೇ, ತವರು ಮನೆಯಿಂದ ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ಭಾನುಪ್ರಿಯಾ ಅವರು ಬುಧವಾರ ರಾತ್ರಿ ಮಗುವನ್ನು ನೇಣು ಹಾಕಿ ಕೊಂದಿದ್ದಾರೆ. ಬಳಿಕ ಅವರೂ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರಿಗೆ ದೂರು ಕೊಟ್ಟಿರುವ ಭಾನುಪ್ರಿಯಾ ಅವರ ಅಕ್ಕ, ‘ವರದಕ್ಷಿಣೆ ಕಿರುಕುಳದಿಂದ ಬೇಸತ್ತು ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಂಗಿಯ ಸಾವಿಗೆ ಹರೀಶ್‌ ಕಾರಣ’ ಎಂದು ಆರೋಪಿಸಿದ್ದಾರೆ. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವರದಕ್ಷಿಣೆ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಹರೀಶ್‌ರನ್ನು ಬಂಧಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು