ಕೋಲಾರ: ಮಹಿಳೆಯೊಬ್ಬರು ಹಣೆಗೆ ಕುಂಕುಮ ಇಟ್ಟುಕೊಂಡಿಲ್ಲವೆಂದು ಅವರನ್ನು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವಾದ ಬುಧವಾರ ಸಂಸದ ಎಸ್.ಮುನಿಸ್ವಾಮಿ ನಿಂದಿಸಿದ ಘಟನೆ ನಗರದಲ್ಲಿ ನಡೆದಿದೆ.
ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ವೇಳೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿದಾಡುತ್ತಿದೆ. ಇದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಕಾರ್ಯಕ್ರಮದ ಪ್ರಯುಕ್ತ ಮಹಿಳೆಯರು ತಾವೇ ತಯಾರಿಸಿದ ಕೆಲ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ರಂಗಮಂದಿರ ಆವರಣದಲ್ಲಿ ತೆರೆದಿದ್ದರು.
ಸುಜಾತಾ ಎಂಬ ಮಹಿಳೆಯ ಮಳಿಗೆ ವೀಕ್ಷಣೆ ವೇಳೆ ಮುನಿಸ್ವಾಮಿ, ‘ಏನಮ್ಮ ನಿನ್ನ ಹೆಸರು, ಹಣೆಗೆ ಏಕೆ ಬೊಟ್ಟು ಇಟ್ಟುಕೊಂಡಿಲ್ಲ? ವೈಷ್ಣವಿ ಎಂಬುದಾಗಿ ಅಂಗಡಿ ಹೆಸರನ್ನು ಏಕೆ ಇಟ್ಟುಕೊಂಡಿದ್ದೀಯಾ? ಮೊದಲು ಬೊಟ್ಟು ಇಟ್ಟುಕೋ’ ಎಂದು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡರು.
‘ಸುಜಾತಾ ಎಂಬ ಹೆಸರು ಇಟ್ಟುಕೊಂಡಿದ್ದೀಯಾ? ನಿನ್ನ ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್‌ಸೆನ್ಸ್ ಇಲ್ಲ. ಯಾರೋ ಕಾಸು ಕೊಡುತ್ತಾರೆಂದು ಮತಾಂತರವಾಗಿಬಿಡುತ್ತೀರಾ’ ಎಂದು ಹರಿಹಾಯ್ದರು.
ಈ ವೇಳೆ ಶಾಸಕ ಕೆ.ಶ್ರೀನಿವಾಸಗೌಡ ತಡೆದರೂ ಸುಮ್ಮನಿರದ ಸಂಸದರು ಕೂಗಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಕೂಡ ಸಮಾಧಾಪಡಿಸಲು ಯತ್ನಿಸಿದರು. ಆದರೂ ಸಮಾಧಾನಗೊಳ್ಳಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.