ಭಾನುವಾರ, ಸೆಪ್ಟೆಂಬರ್ 25, 2022
22 °C

ಕೆರೆ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಸಂಸದರ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಸ್ವಾತಂತ್ರ್ಯ ಅಮೃತ ಮಹೋತ್ಸವd ಪ್ರಯುಕ್ತ ಅಮೃತ್ ಸರೋವರ್ ಯೋಜನೆಯಡಿ ಜಿಲ್ಲೆಯ ಕೆರೆಗಳ ಶುದ್ಧೀಕರಣ, ಪುನರುಜ್ಜೀವನ ಹಾಗೂ ಸುಂದರೀಕರಣ ಕಾಮಗಾರಿಗೆ ಬೇಗನೇ ಚಾಲನೆ ನೀಡಬೇಕು ಎಂದು ಸಂಸದ ಎಸ್‌. ಮುನಿಸ್ವಾಮಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂಬಂಧ ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಯೋಜನೆಗೆ ಬಿಡುಗಡೆಯಾಗಿರುವ ₹ 24 ಕೋಟಿ ಅನುದಾನ ಸಂಬಂಧ ಪರಿಶೀಲನೆ ನಡೆಸಿದರು.

‘ಕಾಮಗಾರಿಗೆ ಚಾಲನೆ ನೀಡಿ ಕೆರೆಗಳನ್ನು ಪುನರುಜ್ಜೀವನ ಗೊಳಿಸಿ, ಸುಂದರವಾಗಿಸಬೇಕು’ ಎಂದರು.

ಕೆರೆ ಅಭಿವೃದ್ಧಿಗೆ ಸಂಬಂಧಿಸಿದ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧಿಕಾರಿಗಳು, ತಹಶೀಲ್ದಾರ್‌ ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್‌ ಕುಮಾರ್‌ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು