ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿ.ಎಂ ರಾಜೀನಾಮೆ ನೀಡಲು ಕೋರ್ಟ್‌ ಹೇಳಿಲ್ಲ: ಸಚಿವ ಬೈರತಿ ಸುರೇಶ್

Published : 2 ಅಕ್ಟೋಬರ್ 2024, 19:21 IST
Last Updated : 2 ಅಕ್ಟೋಬರ್ 2024, 19:21 IST
ಫಾಲೋ ಮಾಡಿ
Comments

ಕೋಲಾರ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ಹೇಳಿಲ್ಲ  ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ತೀರ್ಮಾನ ಏನಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ ಎಂದರು.

ಸಿದ್ದರಾಮಯ್ಯ ಮೊದಲೇ ನಿವೇಶನ ವಾಪಸ್ ನೀಡಲು ಯೋಚಿಸಿದ್ದರು. ವಿರೋಧ ಪಕ್ಷಗಳ ಆರೋಪಗಳನ್ನು ಧೈರ್ಯವಾಗಿ ಎದುರಿಸಲು ಸಿದ್ಧರಾಗಿದ್ದರು. ನಂತರದ ಬೆಳವಣಿಗೆಗಳಿಂದ ಬೇಸತ್ತು ವಾಪಸ್ ನೀಡಿದರು ಎಂದರು. 

‘ಜಾರಿ ನಿರ್ದೇಶನಾಲಯ (ಇ.ಡಿ) ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸುತ್ತೇವೆ. ವಿರೋಧಪಕ್ಷದವರು ಸರ್ಕಾರ ಬೀಳಿಸಲು ಪ್ರಯತ್ನ ಮಾಡಿದರೂ ಯಶಸ್ಸು ಸಿಗಲ್ಲ. ಕಾಂಗ್ರೆಸ್‌ ಬಳಿ 136 ಶಾಸಕರಿದ್ದಾರೆ’ ಎಂದು ಬೈರತಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT