ಮುಳಬಾಗಿಲು: ನಗರದ ಆಂಜನೇಯ ಸ್ವಾಮಿ ದೇವಾಲಯದ ಹುಂಡಿಯಲ್ಲಿ ₹17.12 ಲಕ್ಷ ಸಂಗ್ರಹವಾಗಿದೆ ಎಂದು ಮುಜರಾಯಿ ಅಧಿಕಾರಿ ಸುಬ್ರಮಣಿ ತಿಳಿಸಿದ್ದಾರೆ.

ನಾಲ್ಕು ತಿಂಗಳಿನಿಂದ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಮುಜರಾಯಿ, ಕಂದಾಯ ಅಧಿಕಾರಿಗಳು ಹಾಗೂ ದೇವಾಲಯದ ಸಮಿತಿಯು ದೇವಾಲಯದ ಮುಂಭಾಗದಲ್ಲಿ ವಿಡಿಯೊ ಕವರೇಜ್, ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಮಾಡಿದರು. ಹುಂಡಿಯಲ್ಲಿ 17 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದೆ. ಇದನ್ನು ಹೊರತುಪಡಿಸಿ ಯಾವುದೇ ವಿಧವಾದ ಚಿನ್ನ ಅಥವಾ ಬೆಳ್ಳಿ ಅಥವಾ ವಿದೇಶಿ ಕರೆನ್ಸಿ ಸಂಗ್ರಹವಾಗಿರಲಿಲ್ಲ ಎಂದು ಹೇಳಿದ್ದಾರೆ.

ಈ ಹಿಂದಿನ ನಾಲ್ಕು ತಿಂಗಳ ಅವಧಿಯಲ್ಲಿ ಹುಂಡಿಯಲ್ಲಿ ₹13 ಲಕ್ಷ ಹಣ ಸಂಗ್ರಹವಾಗಿತ್ತು. ಈ ಬಾರಿ ಸುಮಾರು ₹4 ಲಕ್ಷ ಏರಿಕೆಯಾಗಿದೆ. ಇತ್ತೀಚೆಗೆ ದೇವಾಲಯದಲ್ಲಿ ನಡೆದ ವಿಶೇಷ ಕಾರ್ಯಕ್ರಮಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದ್ದೇ ಹೆಚ್ಚಿನ ದೇಣಿಗೆ ಸಂಗ್ರಹಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.