ಮುಳಬಾಗಿಲು: ಗುರುವಾರ ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಬೈಕ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ಮುಳಬಾಗಿಲು ನಗರದ ಜೈಭೀಮ್ ಬುದ್ಧನಗರದ ನಿವಾಸಿ ಸುಬ್ರಮಣಿ ಎಂಬುವವರು ತಮ್ಮ ಬೈಕ್ ಅನ್ನು ಎಂದಿನಂತೆ ಮನೆಯ ಮುಂದಿನ ಗೇಟಿನಲ್ಲಿ ನಿಲ್ಲಿಸಿ ಮಲಗಿದ್ದಾಗ, ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಹಾಗಾಗಿ ದ್ವಿಚಕ್ರ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ.

ಗುರುವಾರ ಮಧ್ಯರಾತ್ರಿ ವಾಹನ ಸುಟ್ಟ ಬೆಂಕಿಯ ಕೆನ್ನಾಲಿಗೆಯ ಬಿಸಿ ಮನೆಯವರಿಗೆ ತಟ್ಟಿದಾಗ ಎಚ್ಚರವಾಗಿ ನೋಡಿದರೆ ವಾಹನ ಸಂಪೂರ್ಣ ಸುಟ್ಟು ನಾಶವಾಗಿತ್ತು ಎಂದು ಸುಬ್ರಮಣಿ ತಿಳಿಸಿದ್ದಾರೆ.

ಕಳೆದ 15 ದಿನಗಳಲ್ಲಿ ಮೂರು ಕಡೆ ಕಿಡಿಗೇಡಿಗಳು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ, ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸದಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-18-1711428083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.