ಮುಳಬಾಗಿಲು: ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಶೇ 33ರಷ್ಟು ಮೀಸಲಾತಿ ನೀಡಲು ಹೊರಟಿದ್ದ ಅನುಮೋದನೆಗೆ ವಿರೋಧ ಪಕ್ಷಗಳು ಅಡ್ಡಿಪಡಿಸಿ ಮಹಿಳೆಯರ ಹಕ್ಕುಗಳನ್ನು ಹತ್ತಿಕ್ಕಲು ಹೊರಟಿವೆ ಎಂದು ಸೋಮವಾರ ಬಿಜೆಪಿ ಪಕ್ಷದ ಮಹಿಳಾ ಮೋರ್ಚಾ ಹಾಗೂ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಕೆಇಬಿ ವೃತ್ತದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಪಕ್ಷದ ಮುಖಂಡರು ಕಾಂಗ್ರೆಸ್ ಮತ್ತಿತರರ ವಿರೋಧ ಪಕ್ಷಗಳ ವಿರುದ್ಧ ಬ್ಯಾನರ್ ಹಿಡಿದು ಹಾಗೂ ಧಿಕ್ಕಾರ ಕೂಗಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿದ ನೀತಿಯನ್ನು ಖಂಡಿಸಿದರು.

ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡಿ ಮಹಿಳೆಯರಿಗೆ ಪುರುಷರಷ್ಟೇ ಅವಕಾಶಗಳನ್ನು ನೀಡಿ ಮಹಿಳೆಯರನ್ನು ಸಶಕ್ತರಾಗಿಸಲು ಹೊರಟಿತ್ತು. ಇದನ್ನು ಸಹಿಸದ ಕಾಂಗ್ರೆಸ್ ಮತ್ತಿತರರ ಇಂಡಿಯಾ ಕೂಟದ ಪಕ್ಷಗಳು ಮಸೂದೆಯನ್ನು ವಿರೋಧಿಸಿ ಮಹಿಳೆಯರನ್ನು ಅವಕಾಶಗಳಿಂದ ವಂಚಿತರಾಗುವಂತೆ ಮಾಡಿವೆ ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಾದರೂ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಒಕ್ಕೂಟದ ಪಕ್ಷಗಳು ಮಸೂದೆ ಸದನದಲ್ಲಿ ಪಾಸಾಗುವಂತೆ ಸಹಕಾರ ನೀಡಿ, ನಿಂತು ಹೋದ ಮೀಸಲಾತಿಯನ್ನು ಪುನಃ ಕೇಂದ್ರ ಸರ್ಕಾರ ಎತ್ತಿಕೊಳ್ಳುವಂತೆ ಮಾಡಬೇಕು. ಇಲ್ಲವಾದಲ್ಲಿ ಮುಂದೆ ರಾಜ್ಯದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸತೀಶ್ ಕುಮಾರ್, ಮಮತಾ, ಗೀತಾ, ಸತೀಶ್, ವಿಶ್ವನಾಥ ರೆಡ್ಡಿ, ಪ್ರಕಾಶ್ ರೆಡ್ಡಿ, ಮೈಕ್ ಶಂಕರ್, ಸೋಮಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-18-206152314

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.