ಮುಳಬಾಗಿಲು: ನಗರ ಹೊರವಲಯದ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಶನಿವಾರ ಅಗ್ನಿಶಾಮಕ ಇಲಾಖೆಯ ನೂತನ ವಾಹನಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ಇತ್ತೀಚೆಗೆ ಬೇಸಿಗೆಯ ಬಿಸಿಲು ಹೆಚ್ಚಾಗುತ್ತಿದ್ದು, ಇದರಿಂದ ಬೆಂಕಿ ಅವಘಡಗಳು ಹೆಚ್ಚಾಗಬಹುದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ಠಾಣೆಗೆ ನೂತನ ವಾಹನವನ್ನು ಸರ್ಕಾರದಿಂದ ಮಂಜೂರು ಮಾಡಲಾಗಿದೆ. ಹಾಗಾಗಿ ಇದನ್ನು ಇಲಾಖೆ ಸದ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ಸೇವೆ ಒದಗಿಸಬೇಕೆಂದು ತಿಳಿಸಿದರು.

ಕಳೆದ ಬಾರಿ ತಾಲ್ಲೂಕಿನಲ್ಲಿ ಎಲ್ಲೆಂದರಲ್ಲಿ ರಸ್ತೆ ಬದಿಯ ಮರಗಿಡಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ನೂರಾರು ಗಿಡಮರಗಳು ನಾಶವಾಗಿದ್ದವು. ಜೊತೆಗೆ ಅಲ್ಲಲ್ಲಿ ಬೆಂಕಿ ಅವಘಡಗಳು ಸಂಭವಿಸಿದ್ದವು. ಹಾಗಾಗಿ ಮುಂದೆ ಅನಾಹುತ ಆಗದಂತೆ ನೂತನ ವಾಹನ ನೀಡಲಾಗಿದೆ ಎಂದರು.

ಅಗ್ನಿಶಾಮಕ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೀಳುವ ಮಳೆಯ ನೀರು ಠಾಣೆಗೆ ನುಗ್ಗುತ್ತದೆ. ಹೈಮಾಸ್ಟ್ ದೀಪ ಇಲ್ಲದೆ ಕತ್ತಲಲ್ಲಿ ತಿರುಗಾಡಬೇಕಾಗುತ್ತದೆ. ವಸತಿ ಗೃಹಗಳಿಗೆ ಹೋಗಿ ಬರಲು ಸಿಮೆಂಟ್ ರಸ್ತೆಯ ಅವಶ್ಯಕತೆ ಇದೆ ಎಂದು ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿ ಕೂಡಲೇ ಎಲ್ಲಾ ಸಮಸ್ಯೆಗಳನ್ನು ಕೆಲವೇ ದಿನಗಳಲ್ಲಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮಂತರಾಯಪ್ಪ, ತಾಲ್ಲೂಕು ಠಾಣಾಧಿಕಾರಿ ಮುನಿರಾಜು, ಸ್ವಾಮಿ, ಲಕ್ಷ್ಮಿ ನಾರಾಯಣ, ಸುರೇಶ್, ಅನಿಲ್ ಕುಮಾರ್, ಶ್ರೀನಿವಾಸ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-18-1163764963

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.