ಮುಳಬಾಗಿಲು: ತಾಲ್ಲೂಕಿನ ತಿಮ್ಮರಾವುತ್ತನಹಳ್ಳಿ ಹಾಗೂ ಮಲ್ಲನಾಯಕನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ನೇತೃತ್ವದಲ್ಲಿ ಬುಧವಾರ ‘ನಮ್ಮ ನಡಿಗೆ ಗ್ರಾಮ ಪಂಚಾಯಿತಿಗಳ ಕಡೆಗೆ’ ಕಾರ್ಯಕ್ರಮ ನಡೆಸಿದರು.

ತಹಶೀಲ್ದಾರ್ ವಿ.ಗೀತಾ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಎನ್.ವಿ.ಬಾಬು ಹಾಗೂ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೂಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿ, ಸ್ಥಳದಲ್ಲೇ ಕೆಲವು ಸಮಸ್ಯೆಗಳನ್ನು ಬಗೆಹರಿಸಿದರೆ, ಇನ್ನು ಕೆಲವು ಸಮಸ್ಯೆಗಳನ್ನು ಒಂದು ವಾರದಲ್ಲಿ ಪರಿಹರಿಸುವ ಭರವಸೆ ನೀಡಿದರು.

ಸಾರ್ವಜನಿಕರು ಕಂದಾಯ, ಬೆಸ್ಕಾಂ, ಬಸ್, ವಿಧವಾ ವೇತನ, ಅಂಗವಿಕಲ ವೇತನ, ಸರ್ವೆ, ಖಾತೆ, ರಸ್ತೆ, ಸ್ಮಶಾನ, ಸ್ಮಶಾನಕ್ಕೆ ರಸ್ತೆ, ವಸತಿ ಹಾಗೂ ನಿವೇಶನ ಸೇರಿದಂತೆ ನಾನಾ ಬಗೆಯ ಸಮಸ್ಯೆಗಳ ಕುರಿತು ಶಾಸಕರಿಗೆ ಸರತಿ ಸಾಲಿನಲ್ಲಿ ನಿಂತು ಅಹವಾಲು ಸಲ್ಲಿಸಿದರು.

ತಿಮ್ಮರಾವುತ್ತನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 59 ಅರ್ಜಿ ಸಲ್ಲಿಕೆಯಾಗಿದ್ದು, 9 ಅರ್ಜಿಗಳನ್ನು ಸ್ಥಳದಲ್ಲೇ ಪರಿಹರಿಸಿದರು. ಜೊತೆಗೆ ಶವಸಂಸ್ಕಾರದ ಚೆಕ್, ವೈದ್ಯಕೀಯ ಚಿಕಿತ್ಸೆ ಪರಿಹಾರ ಹಾಗೂ ಮರಣ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಮಲ್ಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 87 ಅರ್ಜಿಗಳು, 13 ಮೌಖಿಕ ಬೇಡಿಕೆಗಳನ್ನು ಸಾರ್ವಜನಿಕರು ನೀಡಿದರು. ಇದರಲ್ಲಿ 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಯಿತು....

ಈ ವೇಳೆ ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ಸಾರ್ವಜನಿಕರು ತಮ್ಮ ಕೆಲಸಕ್ಕಾಗಿ ಪ್ರತಿನಿತ್ಯ ತಾಲ್ಲೂಕು ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ನಮ್ಮ ನಡೆ ಗ್ರಾಮ ಪಂಚಾಯಿತಿಗಳ ಕಡೆಗೆ ಹಾಗೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದೆ. ಏ.15 ರಿಂದ ಜೂನ್ ತಿಂಗಳ ಒಳಗೆ ತಾಲ್ಲೂಕಿನ 30 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ಮುಂದಾಗಲಾಗುವುದು ಎಂದು ಭರವಸೆ ನೀಡಿದರು.

ಜೂನ್ವರೆಗೂ ಪ್ರತಿ ಗ್ರಾಮ ಪಂಚಾಯಿತಿಗೆ ನಿಗದಿತ ದಿನಾಂಕಗಳಂದು ಬರಲಿದ್ದು, ಆಯಾಯ ಪಂಚಾಯಿತಿ ವ್ಯಾಪ್ತಿಯಲ್ಲಿ ಜನತೆ ಮೌಖಿಕವಾಗಿ ಅಥವಾ ಲಿಖಿತ ರೂಪದಲ್ಲಿ ಅಹವಾಲು ಸಲ್ಲಿಸಬಹುದು. ಸಣ್ಣ ಪುಟ್ಟ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಗುವುದು. ಜೊತೆಗೆ ಉಳಿದ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ವಿ.ಗೀತಾ ಮಾತನಾಡಿ, ಕಾರ್ಯಕ್ರಮದಲ್ಲಿ ಸಾರ್ವಜನಿಕರು ಯಾವುದೇ ಇಲಾಖೆಗಳಿಗೆ ಸೇರಿದ ಸಮಸ್ಯೆಗಳಿದ್ದರೂ ಸಂಕೋಚವಿಲ್ಲದೆ ತಿಳಿಸಿ, ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.

ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಎನ್.ವಿ.ಬಾಬು ಮಾತನಾಡಿ, ಗ್ರಾಮಗಳಲ್ಲಿ ಸ್ವಚ್ಛತೆ, ಚರಂಡಿ, ನಿವೇಶನ ಹಾಗೂ ವಸತಿ ಮತ್ತಿತರರ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳನ್ನು ಗಮನಕ್ಕೆ ತಂದರೆ ಪಂಚಾಯಿತಿ ಸಿಬ್ಬಂದಿ ಮೂಲಕ ಪರಿಹರಿಸಲಾಗುವುದು ಎಂದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸುಗುಣ, ರಘುಪತಿ ರೆಡ್ಡಿ, ಜಯರಾಮ ರೆಡ್ಡಿ, ಸುಬ್ಬಾರೆಡ್ಡಿ, ಮೋಹನ ರೆಡ್ಡಿ ಹಾಗೂ ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-18-94632611

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.