ಮುಳಬಾಗಿಲು: ನಗರದ ನೇತಾಜಿ ಕ್ರೀಡಾಂಗಣದ ಬಳಿ ಸಾಲಾಗಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಗುರುವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿದ್ದು, ಮೂರ್ನಾಲ್ಕು ವಾಹನಗಳಿಗೆ ಬೆಂಕಿಯ ಶಾಖ ತಗುಲಿದೆ.

ಮುಳಬಾಗಿಲು ನಗರದಿಂದ ಬೇರೆಡೆಗೆ ನಾನಾ ಕೆಲಸ ಕಾರ್ಯಗಳಿಗೆ ಹೋಗುವ ದ್ವಿಚಕ್ರ ವಾಹನ ಸವಾರರು ಕ್ರೀಡಾಂಗಣದ ಒಂದು ಭಾಗದಲ್ಲಿ ನಿಲ್ಲಿಸುತ್ತಿದ್ದರು. ಅದೇ ರೀತಿ ಗುರುವಾರವೂ ಸುಮಾರು 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಿದ್ದರು. ಆದರೆ ಆಕಸ್ಮಿಕ ಬೆಂಕಿಗೆ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು. ಆದರೆ, ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ನಾಲ್ಕು ವಾಹನಗಳು ಸುಟ್ಟು ಕರಕಲಾಗಿದ್ದವು. ಉಳಿದ ವಾಹನಗಳನ್ನು ಬೆಂಕಿಯಿಂದ ರಕ್ಷಿಸಿದ್ದಾರೆ.

ನಗರ ಠಾಣೆ ಇನ್ಸ್ಪೆಕ್ಟರ್ ಸುಧಾಕರ್ ರೆಡ್ಡಿ, ಅಣ್ಣಯ್ಯ, ಎಲ್.ಶಿವರಾಜ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-18-239317219

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.