ಮುಳಬಾಗಿಲು: ನಗರದ ಶಿವಕೇಶವ ನಗರದಲ್ಲಿರುವ ಉದ್ಭವ ಶಿವಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಶನಿವಾರ ನೂರಾರು ಭಕ್ತರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ನೆರವೇರಿತು.

ಬ್ರಹ್ಮ ರಥೋತ್ಸವ ಪ್ರಯುಕ್ತ ದೇವಾಲಯದಲ್ಲಿ ಒಂದು ವಾರದಿಂದ ಧಾರ್ಮಿಕ ಕಾರ್ಯಕ್ರಮ ಹಾಗೂ ಉತ್ಸವಗಳು ನೆರವೇರಿದವು. ಶನಿವಾರ ರಥೋತ್ಸವ ಪ್ರಯುಕ್ತ ದೇವರ ಮೂಲ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಜೊತೆಗೆ ವಿವಿಧ ಪೂಜಾ ಕಾರ್ಯಗಳು ನೆರವೇರಿದವು.

ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆ, ನೂರಾರು ಭಕ್ತರು ರಥವನ್ನು ಭಕ್ತಿಯಿಂದ ಎಳೆದರು. ಜೊತೆಗೆ ಭಕ್ತರು ರಥಕ್ಕೆ ಹೂ, ಬಾಳೆಹಣ್ಣು, ದವನ, ಉಪ್ಪು ಮತ್ತಿತರರ ಮಂಗಳಕರ ವಸ್ತುಗಳನ್ನು ಭಕ್ತಿಯಿಂದ ಅರ್ಪಿಸಿ ಹರಕೆ ತೀರಿಸಿದರು.

ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಾಯಿತು. ರಥ ದೇವಾಲಯದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ರಥದ ಉದ್ದಕ್ಕೂ ಭಕ್ತರು ಘೋಷಣೆ ಕೂಗುತ್ತಾ ಸಾಗಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-18-900774637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.