ಮುಳಬಾಗಿಲು: ನಗರದ ಪುರಾಣ ಪ್ರಸಿದ್ಧ ಅರ್ಜುನ ಪ್ರತಿಷ್ಟಾಪಿತ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಬುಧವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.

ರಥೋತ್ಸವ ಪ್ರಯುಕ್ತ ದೇವರ ಮೂಲ ವಿಗ್ರಹ ಹಾಗೂ ದೇವಾಲಯವನ್ನು ನಾನಾ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಜೊತೆಗೆ ವಿವಿಧ ಪೂಜಾ ಕಾರ್ಯಗಳು ಹಾಗೂ ಉತ್ಸವಗಳು ನಡೆದವು.

ಬಿಸಿಲಿನ ಹಿನ್ನೆಲೆ ಬೆಳಗ್ಗೆಯೇ ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ತಹಶೀಲ್ದಾರ್ ವಿ.ಗೀತಾ ರಥೋತ್ಸವಕ್ಕೆ ಚಾಲನೆ ನೀಡಿದರು.

ರಥಕ್ಕೆ ಚಾಲನೆ ಸಿಗುತ್ತಿದ್ದಂತೆ ಭಕ್ತರು ರಥಕ್ಕೆ ಬಾಳೆಹಣ್ಣು, ದವನ, ಹೂ ಸೇರಿದಂತೆ ವಿವಿಧ ಮಂಗಳಕರ ವಸ್ತುಗಳನ್ನು ಅರ್ಪಿಸುವ ಮೂಲಕ ಹರಕೆ ತೀರಿಸಿದರು.

ನಂತರ ರಥ ದೇವಾಲಯದ ಮುಂಭಾಗದಿಂದ ಕುರುಬರಪೇಟೆ, ರಾಮಸಮುದ್ರಂ ರಸ್ತೆ, ತಾಲ್ಲೂಕು ಪಂಚಾಯಿತಿ ಕಚೇರಿಗಳ ಮುಂಭಾಗದಲ್ಲಿ ಮೆರವಣಿಗೆ ಸಾಗಿತು. ಮೆರವಣಿಗೆ ಉದ್ದಕ್ಕೂ ಸಾವಿರಾರು ಮಂದಿ ಘೋಷಣೆ ಕೂಗುತ್ತಾ ಸಾಗಿದರು. ಭಕ್ತರಿಗೆ ಅಲ್ಲಲ್ಲಿ ಪಾನಕ, ಮಜ್ಜಿಗೆ, ಅನ್ನದಾನ ನಡೆಯಿತು.

ರಥೋತ್ಸವಕ್ಕೂ ಮುನ್ನ ದೇವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆ ಮಾಡಲಾಯಿತು.

ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಎನ್.ವಿ.ಬಾಬು, ದೇವಾಲಯದ ಅಭಿವೃದ್ಧಿ ಸಮಿತಿ ಹಾಗೂ ಮುಡಾ ಅಧ್ಯಕ್ಷ ಆರ್.ಎಸ್.ಸುಹಾಸ್ ಶೆಟ್ಟಿ, ನಗವಾರ ಸತ್ಯಣ್ಣ, ಗೊಲ್ಲಹಳ್ಳಿ ಜಗದೀಶ್, ಲಕ್ಷ್ಮಿ ನಾರಾಯಣ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-18-659991560

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.