ಮುಳಬಾಗಿಲು: ತಾಲ್ಲೂಕಿನ ಬಂಡಹಳ್ಳಿ ಗ್ರಾಮದಲ್ಲಿ ಶನಿವಾರ ಗ್ರಾಮೀಣ ಮಹಿಳಾ ಒಕ್ಕೂಟ ವತಿಯಿಂದ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಈ ವೇಳೆ ವಕೀಲ ಎಂ.ಎಸ್.ಶ್ರೀನಿವಾಸ್ ರೆಡ್ಡಿ ಮಾತನಾಡಿ, ಮಹಿಳೆಯರು ತಮ್ಮ ಹಕ್ಕುಗಳು, ಗೃಹ ಹಿಂಸೆ ತಡೆ ಕಾಯ್ದೆ, ಮಹಿಳಾ ಸುರಕ್ಷತೆ ಹಾಗೂ ಮಕ್ಕಳ ಶಿಕ್ಷಣ ಹಕ್ಕುಗಳ ಕುರಿತು ಅರಿವು ಹೊಂದಿರಬೇಕು. ಹಾಗಾಗಿ ಕಾನೂನು ಸೇವೆಗಳ ಸಮಿತಿ ವತಿಯಿಂದ ಕಾನೂನು ಸಲಹೆ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಯಾವುದೇ ಸಮಸ್ಯೆಯನ್ನು ಮಹಿಳೆಯರು ಧೈರ್ಯವಾಗಿ ಎದುರಿಸಲು ಕಾನೂನು ಅರಿವು ಅಗತ್ಯ. ಹಾಗಾಗಿ ಪ್ರಾಥಮಿಕ ಹಂತದ ಕಾನೂನುಗಳನ್ನು ಅರಿತು ಸಮಾಜದಲ್ಲಿ ಎದುರಾಗುವ ಸಮಸ್ಯೆ ಹಾಗೂ ಸಾಂಸಾರಿಕ ಸಂಘರ್ಷ ತಪ್ಪಿಸಬಹುದು ಎಂದರು.

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕುರಿತು ಪುಸ್ತಕ ವಿತರಿಸಲಾಯಿತು. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಮ್ಮ, ಗ್ರಾಮೀಣ ಮಹಿಳಾ ಒಕ್ಕೂಟದ ಪಾಪಮ್ಮ, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-18-942663118

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.