ಮುಳಬಾಗಿಲು: ತಾಲ್ಲೂಕಿನ ಎಂ.ಚಮಕಲಹಳ್ಳಿ ಬಳಿಯ ಶ್ರೀಘಟ್ಟು ವೆಂಕಟರಮಣ ದೇವಾಲಯದ ನಿರ್ಮಾಣ ಹಂತದಲ್ಲಿರುವ ಕಲ್ಯಾಣ ಮಂಟಪದಲ್ಲಿ ಸುಮಾರು 50-60 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಶುಕ್ರವಾರ ಸ್ಥಳೀಯರು ನೀಡಿದ ಮಾಹಿತಿಯನ್ನು ಆಧರಿಸಿ ನಂಗಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇತ್ತೀಚೆಗೆ ಘಟ್ಟು ವೆಂಕಟರಮಣ ಸ್ವಾಮಿ ದೇವಾಲಯದ ಬಳಿ ಬ್ರಹ್ಮ ರಥೋತ್ಸವ ಹಾಗೂ ಪುಷ್ಪ ಪಲ್ಲಕ್ಕಿ ನಡೆದಿದ್ದು, ಜಾತ್ರೆಗೆ ಬಂದ ಸಂದರ್ಭದಲ್ಲಿ ವೃದ್ಧೆ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅಪರಿಚಿತ ಶವವನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಸಂಬಂಧಿಕರಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಸಹಾಯಕ ಸಬ್ ಇನ್ಸ್ಪೆಕ್ಟರ್ ಶ್ರೀರಾಮಯ್ಯ, ಸುರೇಶ್ ಕುಮಾರ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಂಗಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.