ಮುಳಬಾಗಿಲು: ಕಾನೂನುಬಾಹಿರವಾಗಿ ನಾಲ್ಕು ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಆರೋಪದ ಮೇರೆಗೆ ಮಂಗಳವಾರ ಟೆಂಪೊ ಒಂದರ ಮೇಲೆ ನಡೆಸಿದ ಪೊಲೀಸರು, ನಾಲ್ಕು ಹಸುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮುಳಬಾಗಿಲು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣದಲ್ಲಿ ಕೋಲಾರದ ರಹಮತ್ ನಗರದ ಸೈಯದ್ ಜಾಕೀರ್ ಹುಸೇನ್ ಬಂಧಿತ ಆರೋಪಿ.

ಬಂಧಿತ ಆರೋಪಿಯು ಪುಂಗನೂರು ಸಂತೆಯಲ್ಲಿ ನಾಲ್ಕು ಹಸುಗಳನ್ನು ಖರೀದಿಸಿ, ಮುಳಬಾಗಿಲು ನಗರದಿಂದ ಕೋಲಾರಕ್ಕೆ ಸಾಗಿಸುತ್ತಿದ್ದರು. ಈ ಸಂದರ್ಭದಲ್ಲಿ ಕೆಲವು ಯುವಕರು ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬುದಾಗಿ ಮುಳಬಾಗಿಲು ನಗರ ಠಾಣೆಗೆ ಮಾಹಿತಿ ನೀಡಿದರು. ಈ ಪ್ರಕಾರ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಟೆಂಪೊ ಮತ್ತು ನಾಲ್ಕು ಹಸುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ತಾನು ಹಸುಗಳನ್ನು ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಯಾವುದೇ ಅಕ್ರಮ ಎಸಗಿಲ್ಲ. ಹೀಗಾಗಿ, ಹಸುಗಳು ಹಾಗೂ ಟೆಂಪೊವನ್ನು ಬಿಟ್ಟು ಕಳುಹಿಸಬೇಕು ಎಂದು ಆರೋಪಿ ಸೈಯದ್ ಜಾಕೀರ್ ಹುಸೇನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಠಾಣೆ ಎದುರು ಸುಮಾರು ಮಂದಿ ಜಮಾಯಿಸಿದ ಕಾರಣ ಪರ–ವಿರೋಧ ಚರ್ಚೆಗಳು ನಡೆದು, ಗೊಂದಲದ ವಾತಾವರಣ ಉಂಟಾಯಿತು. ಈ ವೇಳೆ ಪೊಲೀಸರು ಜನರ ಗುಂಪನ್ನು ಚದುರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-18-1681106211

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.