ಮುಳಬಾಗಿಲು: ತಾಲ್ಲೂಕಿನ ಮೂವತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾದ ಸೌಲಭ್ಯಗಳನ್ನು ವಂಚಿಸಲಾಗಿದೆ. ಈ ಕುರಿತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮತ್ತು ರೈತ ಮಿತ್ರ ಸಂಘಟನೆ ವತಿಯಿಂದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಳ್ಳಲಾಗಿದೆ.

ಮೇಲೆ ಎಸ್ಸಿ ಎಸ್ಟಿ ಕಾಯ್ದೆಯ ಅಡಿಯಲ್ಲಿ ದೂರು ದಾಖಲು ಮಾಡಬೇಕು. ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಮತ್ತು ಹಣದುರುಪಯೋಗದ ಬಗ್ಗೆ ತನಿಖೆಮಾಡಿ ಅವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಸಂಘಟನಾ ಸಂಚಾಲಕ ಮೆಕಾನಿಕ್ ಶ್ರೀನಿವಾಸ್ ಮಾತನಾಡಿ, ‘ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಣ ದುರುಪಯೋಗ ವಿಚಾರದಲ್ಲಿ ತಾ.ಪಂ ಇಒ ಹಾಗೂ ಪಿಡಿಒಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಯ್ದೆಯಡಿ ದೂರು ದಾಖಲಿಸಬೇಕು. ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಮತ್ತು ಹಣ ದುರುಪಯೋಗದ ಬಗ್ಗೆ ತನಿಖೆ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾದ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕದೆ ಉದ್ದೇಶಪೂರಕವಾಗಿ ತಡೆಹಿಡಿಯಲಾಗಿದೆ. ಹೀಗಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತನಿಖೆ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಮೋಟಾರ್ ಪಂಪ್ ವಿತರಣೆಯಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಈ ಕುರಿತು ಪ್ರತಿಕ್ರಿಯಿಸಿದ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ. ಸರ್ವೇಶ್, ‘ಪಿಡಿಒಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರ ನನಗೆ ಇಲ್ಲ. ಏಳು ದಿನಗಳ ಒಳಗೆ ಮಾಹಿತಿ ನೀಡುವಂತೆ ಎಲ್ಲರಿಗೂ ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ’ ಎಂದರು.

ರೈತಮಿತ್ರ ತಾಲ್ಲೂಕು ಅಧ್ಯಕ್ಷ ಎಂ.ವಿ. ಬಾಲಕೃಷ್ಣ, ಕಸವಿರೆಡ್ಡಿಹಳ್ಳಿ ರಾಜು, ಕೀಳಹೊಳಲಿ ಸತೀಶ್, ಕೃಷ್ಣ, ಸೋಮ, ಹರಿ, ಅಶೋಕ್, ಅಭಿ, ರಂಚಿತ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.