ಮುಳಬಾಗಿಲು: ತಾಲ್ಲೂಕಿನ ಎಂ.ಚಮಕಲಹಳ್ಳಿ ಬಳಿಯ ಘಟ್ಟು ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ನಡೆಯಿತು.

ತಾಲ್ಲೂಕಿನ ಮುಷ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘಟ್ಟು ವೆಂಕಟರಮಣ ಸ್ವಾಮಿ ರಥೋತ್ಸವ ಅಂಗವಾಗಿ ದೇವರ ಮೂಲ ವಿಗ್ರಹವನ್ನು ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತು. ಬೆಳಗ್ಗೆಯಿಂದ ವಿವಿಧ ಪೂಜಾ ಕಾರ್ಯಗಳು ನಡೆದವು.

ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆ ಭಕ್ತರು ರಥಕ್ಕೆ ಬಾಳೆಹಣ್ಣು, ದವನ, ಹೂ, ಉಪ್ಪು ಮತ್ತಿತರರ ಮಂಗಳಕರ ವಸ್ತುಗಳನ್ನು ರಥಕ್ಕೆ ಅರ್ಪಿಸಿ ಹರಕೆ ಸಲ್ಲಿಸಿದರು.

ರಥೋತ್ಸವಕ್ಕೆ ಕೇವಲ ಸುತ್ತಮುತ್ತಲಿನ ಭಕ್ತರಷ್ಟೇ ಅಲ್ಲದೆ ನೆರೆಯ ಆಂಧ್ರಪ್ರದೇಶ, ತೆಲಂಗಾಣ ಮತ್ತಿತರರ ಕಡೆಗಳಿಂದ ಆಗಮಿಸಿದ್ದರು. ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಜೊತೆಗೆ ಅಲ್ಲಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು.

ತಾಲ್ಲೂಕಿನಲ್ಲಿ ರಾಮ ನವಮಿ: ಶ್ರೀರಾಮ ನವಮಿ ಪ್ರಯುಕ್ತ ತಾಲ್ಲೂಕಿನಾದ್ಯಂತ ರಾಮ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ಪೂಜೆ ನಡೆಯಿತು. ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಕೋಸಂಬರಿ ವಿತರಿಸಿದರು.

ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75, ಎನ್.ವಡ್ಡಹಳ್ಳಿ ಹಾಗೂ ಆಂಧ್ರಪ್ರದೇಶದ ಪುಂಗನೂರು ರಸ್ತೆ, ಬೈಯಪ್ಪನಹಳ್ಳಿ ರಸ್ತೆ, ತಾಯಲೂರು ರಸ್ತೆ, ಕೆಜಿಎಫ್ ಹಾಗೂ ಗೂಕುಂಟೆ ಮತ್ತಿತರರ ರಾಜ್ಯ ಹೆದ್ದಾರಿಗಳಲ್ಲಿ ಆಂಜನೇಯ ಸ್ವಾಮಿ ದೇವಾಲಯ ಮುಂದೆ ಭಕ್ತರು ಪೂಜೆ ನಡೆಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎಲ್ಲಾ ವಾಹನ ಸವಾರರಿಗೆ ಪಾನಕ, ಮಜ್ಜಿಗೆ ಕೋಸಂಬರಿ ವಿತರಿಸುತ್ತಿದ್ದದ್ದು ಕಂಡು ಬಂತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-18-1802129788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.