ಮುಳಬಾಗಿಲು: ನಗರದಲ್ಲಿರುವ ನಿವೇಶನ ರಹಿತ ನಿವಾಸಿಗಳಿಗೆ ಸರ್ಕಾರದ ಆಶ್ರಯ ಯೋಜನೆಯಡಿಯಲ್ಲಿ 300 ನಿವೇಶನ ವಿತರಿಸುವ ಸಲುವಾಗಿ ನಾಲ್ಕು ದಿನಗಳಲ್ಲಿ ಅರ್ಜಿ ಅಹ್ವಾನಿಸಲಾಗುವುದು ಎಂದು ಶಾಸಕ ಸಮೃದ್ಧಿ ಮಂಜುನಾಥ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸಂಜೆ ಎರಡು ಬಸ್ ತಂಗುದಾಣ ಹಾಗೂ ಆರು ಕಡೆ ಹೈಮಾಸ್ಟ್ ದೀಪಗಳನ್ನು ಉದ್ಘಾಟಿಸಿ ಮಾತನಾಡಿದರು.

ಹಲವು ವರ್ಷಗಳಿಂದ ಕೆಲವರು ನಿವೇಶನ ಇಲ್ಲದೆ ಮನೆಗಳನ್ನು ನಿರ್ಮಿಸಿಕೊಳ್ಳದೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಅಂತಹವರನ್ನು ಗುರುತಿಸಿ ನಿವೇಶನ ವಿತರಿಸಲಾಗುವುದು ಎಂದರು.

ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ 700 ಮನೆಗಳನ್ನು ನಿರ್ಮಿಸಲು ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿರುವ ಕೆರೆ, ಪುಷ್ಕರಣಿಗಳನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಸರ್ಕಾರದಿಂದ ಅನುದಾನ ಮಂಜೂರಾಗುತ್ತಿದೆ. ನಗರದ 31 ವಾರ್ಡ್ಗಳಲ್ಲಿ ಸಿಸಿ ರಸ್ತೆ ನಿರ್ಮಿಸಲಾಗುವುದು. ಯಾವುದೇ ವಾರ್ಡಿನಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ನಗರಸಭೆ ಪೌರಾಯುಕ್ತ ಆಂಜನೇಯಲು, ಡಿಸಿಸಿ ಬ್ಯಾಂಕ್ ನಿರ್ದೇಶಕ ರಘುಪತಿ ರೆಡ್ಡಿ, ಗೊಲ್ಲಹಳ್ಳಿ ಜಗದೀಶ್, ನಗವಾರ ಎನ್.ಆರ್. ಸತ್ಯಣ್ಣ, ಸೋಮಣ್ಣ, ಪ್ರಸಾದ್, ಪದ್ಮ ರಘು, ನಾಗೇಶ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-18-1860967609

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.