ಮುಳಬಾಗಿಲು: ತಾಲ್ಲೂಕಿನ ಬೈರಕೂರು ಹೋಬಳಿಯ ಪೆರಮಾಕನಹಳ್ಳಿ ರಸ್ತೆಯಲ್ಲಿರುವ ಪ್ರಸನ್ನ ಸೋಮೇಶ್ವರ ಹಾಗೂ ಸೋಮೇಶ್ವರ ಪಾಳ್ಯದ ಸೋಮೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಶುಕ್ರವಾರ ನಡೆದವು.

ಮುಳಬಾಗಿಲು ನಗರದ ಸೋಮೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವಕ್ಕೆ ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ತಹಶೀಲ್ದಾರ್ ವಿ.ಗೀತಾ ಚಾಲನೆ ನೀಡಿದರು.

ರಥೋತ್ಸವ ಪ್ರಯುಕ್ತ ದೇವರ ಮೂಲ ವಿಗ್ರಹವನ್ನು ವಿಶೇಷ ಹೂ ಹಾಗೂ ಬೆಳ್ಳಿ ಆಭರಣಗಳಿಂದ ಅತ್ಯಾಕರ್ಷಕವಾಗಿ ಅಲಂಕರಿಸಲಾಗಿತ್ತು. ಜೊತೆಗೆ ವಿವಿಧ ಪೂಜಾ ಕಾರ್ಯಕ್ರಮಗಳು ಹಾಗೂ ಉತ್ಸವಗಳು ನೆರವೇರಿದವು.

ರಥೋತ್ಸವಕ್ಕೂ ಮುನ್ನ ದೇವರು ವಿಗ್ರಹಗಳನ್ನು ದೇವಾಲಯದ ಬಳಿ ಮೆರವಣಿಗೆ ಮಾಡಲಾಯಿತು. ನಂತರ ವಿಗ್ರಹಗಳನ್ನು ರಥದಲ್ಲಿ ಕೂರಿಸಿ ಮೆರವಣಿಗೆ ನಡೆಸಿದರು. ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥ ಎಳೆದರು. ರಥ ಕದಲುತ್ತಿದ್ದಂತೆ ಕೆಲವು ಭಕ್ತರು ಹೂ, ಬಾಳೆಹಣ್ಣು, ಉಪ್ಪು, ದವನ ಮತ್ತಿತರರ ಮಂಗಳಕರ ವಸ್ತ್ರಗಳನ್ನು ರಥಕ್ಕೆ ಅರ್ಪಿಸಿ ಹರಕೆ ತೀರಿಸಿದರು.

ನಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಜಾತ್ರೆಯಲ್ಲಿ ಅನ್ನದಾನ, ಪಾನಕ, ಮಜ್ಜಿಗೆ, ಕೋಸಂಬರಿ, ಪಾಯಸ ವಿತರಣೆ ನಡೆಯಿತು.

ಧರ್ಮದರ್ಶಿ ಕೃಷ್ಣಪ್ಪ, ರಾಜೇಂದ್ರ ಗೌಡ, ಸರ್ವಜ್ಞ ಗೌಡ, ಗುಜ್ಜನಹಳ್ಳಿ ಮಂಜುನಾಥ್, ಬೈರಕೂರು ರಾಮಾಂಜಿ, ವೇಣು, ಶೇಖರ್, ಕಾಡೇನಹಳ್ಳಿ ರವಿ, ಲಕ್ಷ್ಮಿ ನಾರಾಯಣ ಶೆಟ್ಟಿ, ಬೂದಿದೇರು ಸೋಮು, ಸುಧಾಕರ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-18-1119047746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.