ಮುಳಬಾಗಿಲು: ಇತ್ತೀಚೆಗೆ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದ್ದು, ತಮ್ಮ ಭವಿಷ್ಯವನ್ನು ನಾಶಪಡಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಮಕ್ಕಳನ್ನು ಮೊಬೈಲ್ನಿಂದ ದೂರವಿರಿಸಿ ಎಂದು ಮುಳಬಾಗಿಲು ನ್ಯಾಯಾಲಯಗಳ ಸರ್ಕಾರಿ ಸಹಾಯಕ ಅಭಿಯೋಜಕ ಆರ್.ನಾಗರಾಜ್ ತಿಳಿಸಿದರು.

ನಗರದ ಅಮರಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶ ನಿರ್ಮಾಣಕ್ಕೆ ಮಕ್ಕಳ ಪಾತ್ರ ಮಹತ್ವದ್ದು. ಹಾಗಾಗಿ ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಆಗ ಮಕ್ಕಳು ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದರು.

ಇತ್ತೀಚೆಗೆ ಮೊಬೈಲ್ ಗುಂಗಿನಲ್ಲಿ ಸಿಲುಕಿರುವ ಮಕ್ಕಳನ್ನು ಮೊಬೈಲ್ನಿಂದ ದೂರವಿರಿಸುವುದೇ ದೊಡ್ಡ ಸವಾಲ್ ಆಗಿದೆ. ಹಾಗಾಗಿ ಪೋಷಕರು ಮಕ್ಕಳನ್ನು ದೇಸಿ ಆಟ ಹಾಗೂ ಪುಸ್ತಕ ಓದುವ ಹವ್ಯಾಸದತ್ತ ಸೆಳೆಯಬೇಕು ಎಂದರು.

ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಅಶೋಕ್ ಕುಮಾರ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮೌಲ್ಯಗಳ ಕಲಿಕೆಗೆ ಅವಕಾಶ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ವಿದ್ಯಾರ್ಥಿಗಳಿಗೆ ಮೊಬೈಲ್ನಿಂದ ದೂರವಿರುವ ಕುರಿತು ಪ್ರತಿಜ್ಞಾ ವಿಧ ಬೋಧಿಸಿದರು.

ಅಶೋಕ್ ಕುಮಾರ್, ರಘು, ಪ್ರಾಂಶುಪಾಲ ಮುನಿನಾರಾಯಣಪ್ಪ, ಚಂಗಾರೆಡ್ಡಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.