ಶನಿವಾರ, ಡಿಸೆಂಬರ್ 3, 2022
27 °C

ಸಿದ್ದರಾಮಯ್ಯ ಸಮ್ಮುಖದಲ್ಲಿ ಮುನಿಯಪ್ಪ, ಖರ್ಗೆಗೆ ಜಯಘೋಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಪ್ರತ್ಯೇಕವಾಗಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಬಣದವರು ಸ್ವಾಗತ ಕೋರಿದರು.

ಭಾನುವಾರ ಮಧ್ಯಾಹ್ನ ಇಲ್ಲಿನ ಅಂಬೇಡ್ಕರ್ ಪ್ರತಿಮೆ ಬಳಿ ಸೇರಿದ ಮುಖಂಡರು ಹಾಗೂ ಕಾರ್ಯಕರ್ತರು ಸಿದ್ದರಾಮಯ್ಯ ಸಮ್ಮುಖದಲ್ಲಿ ಮುನಿಯಪ್ಪ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಯಘೋಷ ಹಾಕಿದರು.

ಬಳಿಕ ಸಿದ್ದರಾಮಯ್ಯ ಅವರಿಗೆ ಬೃಹತ್ ಹಾರ ಹಾಕಿ ಸ್ವಾಗತಿಸಿದರು. ಅಂಬೇಡ್ಕರ್ ಪ್ರತಿಮೆಗೆ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ದಲಿತ ಮುಖಂಡರು ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಬಣದವರು, 'ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕೂಗಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು