ಮುಳಬಾಗಿಲು: ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತು ಮಗಳನ್ನು ಕುಂಟೆ ನೀರಿನಲ್ಲಿ ಮುಳುಗಿಸಿ, ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಮುಡಿಯನೂರು ಗ್ರಾಮದಲ್ಲಿ ನಡೆದಿದೆ.

ಮುಳಬಾಗಿಲು ತಾಲ್ಲೂಕಿನ ಮುಡಿಯನೂರು ಗ್ರಾಮದ ಲೋಕೇಶ್ (35) ಹಾಗೂ ನಿಹಾರಿಕಾ(4) ಮೃತರು.

ಲೋಕೇಶ್ ಅವರ ಪತ್ನಿ ನವ್ಯ ಅದೇ ಗ್ರಾಮದ ಬೇರೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು. ಈ ಸಂಬಂಧ ಪತಿ ಹಾಗೂ ಕುಟುಂಬಸ್ಥರು ಹಲವು ಬಾರಿ ನ್ಯಾಯ ಪಂಚಾಯಿತಿ ಮಾಡಿ ಸರಿದಾರಿಗೆ ತರಲು ಯತ್ನಿಸಿದ್ದರು. ಆದರೂ, ಪತ್ನಿಯ ಅನೈತಿಕ ಸಂಬಂಧ ಮುಂದುವರೆಯುತ್ತಲೇ ಇತ್ತು. ಇದರಿಂದ ಬೇಸತ್ತ ಪತಿ ಮಗಳನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ. ನಂತರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮುಂಭಾಗದಲ್ಲಿರುವ ಮರವೊಂದಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕೇಶ್ ಹಾಗೂ ಮಗಳು ಮನೆಗೆ ಬಾರದಿದ್ದಕ್ಕೆ ಗಾಬರಿಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾಗ ನೇಣು ಬಿಗಿದ ಸ್ಥಿತಿಯಲ್ಲಿ ಲೋಕೇಶ್ ಅವರ ಮೃತ ದೇಹ ಕಾಣಿಸಿಕೊಂಡಿದೆ.

ಲೋಕೇಶ್ ಅವರು ಸಾಯುವ ಮುನ್ನಾ, ನವ್ಯ ಅವರು ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಂದಿಗೆ ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪರಾರಿಯಾಗಿದ್ದರು. ತನ್ನನ್ನು ಯಾರೂ ಹುಡಕಬೇಡಿ ಎಂದು ಪತ್ರ ಬರೆದಿದ್ದರು ಎಂದು ಮೃತರ ಕುಟುಂಬಸ್ಥರು ದೂರಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಸರ್ಕಲ್ ಇನ್ಸ್ಪೆಕ್ಟರ್ ಸತೀಶ್ ಕುಮಾರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅರುಣ್ ಗೌಡ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.