ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾರಪೇಟೆ: ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ

Published 20 ಅಕ್ಟೋಬರ್ 2023, 14:11 IST
Last Updated 20 ಅಕ್ಟೋಬರ್ 2023, 14:11 IST
ಅಕ್ಷರ ಗಾತ್ರ

ಬಂಗಾರಪೇಟೆ: ಹುತಾತ್ಮ ಯೋಧರ ಸ್ಮರಣಾರ್ಥ ನವದೆಹಲಿಯಲ್ಲಿ ‘ಅಮೃತವಾಟಿಕ’ ಸ್ಮಾರಕ ನಿರ್ಮಿಸಲಾಗುತ್ತಿದ್ದು, ಅದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಯಿಂದ ಮಣ್ಣನ್ನು ಕ್ರೂಢೀಕರಿಸಿ ಅಮೃತ ಕಳಶ ಮೂಲಕ ದೆಹಲಿಗೆ ರವಾನಿಸಲಾಗುತ್ತಿದೆ. ಇದು ದೇಶದ ಘನತೆಯ ಪ್ರತೀಕ ಹಾಗೂ ಯೋಧರಿಗೆ ಸಲ್ಲಿಸುವ ಗೌರವ ನಮನ  ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ, ಕಂದಾಯ ಇಲಾಖೆ, ಪುರಸಭೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮವು ಆಜಾದಿ ಕಾ ಅಮೃತ ಮಹೋತ್ಸವದ ಸಮಾರೋಪ ಸಮಾರಂಭವಾಗಿದೆ. ದೇಶಾದ್ಯಂತ ಸುಮಾರು 7.500 ಗ್ರಾಮ ಪಂಚಾಯಿತಿಯಿಂದ ಮಣ್ಣನ್ನು ಕ್ರೂಢೀಕರಿಸಿ, ದೇಶದ ವಿವಿಧ ಭಾಗಗಳಿಂದ ಸಸಿಗಳನ್ನು ತಂದು ಅಮೃತವಾಟಿಕ ನಿರ್ಮಿಸಲಾಗುತ್ತದೆ. ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆ ಪ್ರಶಂಸೆಗೆ ಅರ್ಹವಾಗಿದೆ ಎಂದರು.

ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳಿಂದ ಮಣ್ಣನ್ನು ಸಂಗ್ರಹಿಸಲಾಗಿದ್ದು, ಜಿಲ್ಲಾಡಳಿತಕ್ಕೆ ತಲುಪಿಸಲಾಗುತ್ತದೆ. ನಂತರ ಅದು ದೆಹಲಿಗೆ ರವಾನಿಸಲಾಗುತ್ತದೆ ಎಂದರು.‌

ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಮಹಿಳಾ ಸಂಘ ಸಂಸ್ಥೆಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಒಳಗೊಂಡಂತೆ ಎಲ್ಲಾ ಅಧಿಕಾರಿಗಳು ಅಮೃತ ಕಳಶ ಹೊತ್ತು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕಾರ್ಯಕ್ರಮಕ್ಕೆ ಮೆರಗು ತಂದರು. 

ತಹಶೀಲ್ದಾರ್ ಯು.ರಶ್ಮಿ, ಪುರಸಭಾ ಮುಖ್ಯಾಧಿಕಾರಿ ಮೀನಾಕ್ಷಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರವಿಕುಮಾರ್, ಸಿಡಿಪಿಓ ಮುನಿರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎನ್.ಸುಕನ್ಯಾ, ಪಕ್ಷದ ದಾಸೋಹ ಅಧಿಕಾರಿ ಯುವರಾಜ್, ಪಿಡಿಒ ಸಂಘದ ಅಧ್ಯಕ್ಷ ನಾರಾಯಣಪ್ಪ, ಮಧು, ವಸಂತ್, ಸರಸ್ವತಿ, ಭಾಸ್ಕರ್, ವಾಣಿ, ದಿವ್ಯಾ, ಶಂಕರ್, ಆರೋಗ್ಯ ನಿರೀಕ್ಷಕ ಗೋವಿಂದರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT