ವೇಮಗಲ್: ಹೋಬಳಿಯ ಕ್ಯಾಲನೂರು ಕರ್ನಾಟಕ ಪಬ್ಲಿಕ್ ಶಾಲೆಗೆ ಗುರುವಾರ ಶಿಕ್ಷಣ ಇಲಾಖೆಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ನೋಡಲ್ ಅಧಿಕಾರಿಗಳಾದ ಅಶೋಕ್ ಅವರು ಭೇಟಿ ನೀಡಿ ಶಾಲೆಯು ಉತ್ತಮ ಫಲಿತಾಂಶದ ಪಡೆಯುವುದರ ಜೊತೆಗೆ ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡಬೇಕು. ಮಕ್ಕಳ ಬದುಕಿಗೆ ಮುಂದೆ ಶಿಕ್ಷಣ ಜೊತೆ ಅವು ದಾರಿದೀಪವಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಓ ಮಲ್ಲಿಕಾರ್ಜುನ್ ಹಾಗೂ ಶಿಕ್ಷಕರು ಹಾಜರಿದ್ದರು.