ಕೋಲಾರ: ಜಿಲ್ಲೆಯ ಮಕ್ಕಳ ಆರೋಗ್ಯ ರಕ್ಷಣೆ ಮತ್ತು ಪೌಷ್ಟಿಕಾಂಶ ವೃದ್ಧಿಯ ಉದ್ದೇಶದಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಎಂ.ಆರ್.ರವಿ ಸೋಮವಾರ ಜಿಲ್ಲಾಡಳಿತ ಭವನದಲ್ಲಿ ಚಾಲನೆ ನೀಡಿದರು.

ಮಕ್ಕಳಲ್ಲಿನ ರಕ್ತಹೀನತೆ ತಡೆಗಟ್ಟಲು ಮತ್ತು ದೈಹಿಕ, ಮಾನಸಿಕ ಬೆಳವಣಿಗೆಗೆ ಜಂತುಹುಳು ನಿವಾರಣೆ ಅತ್ಯಗತ್ಯ. ಜಿಲ್ಲೆಯ ಪ್ರತಿಯೊಬ್ಬ ಮಗುವೂ ಈ ಯೋಜನೆಯ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಖಾಸಗಿ ಶಾಲೆ ಮತ್ತು ಕಾಲೇಜುಗಳಲ್ಲಿ 1 ರಿಂದ 19 ವರ್ಷದೊಳಗಿನ ಒಟ್ಟು 4,61,633 ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದರು.

ಮಾತ್ರೆ ವಿತರಣೆ ಆರಂಭವಾಗಿದ್ದು, ಫೆ.16 ರಂದು ‘ಮಾಪ್-ಅಪ್’ ದಿನವನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಶ್ರೀನಿವಾಸ್, ಆರ್ಸಿಎಚ್ ಅಧಿಕಾರಿ ಡಾ.ಚಾರಿಣಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.