ಬುಧವಾರ, ಜೂನ್ 29, 2022
24 °C

ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಿವಾಸಪುರ: ‘ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವ ಮುನ್ನ ಅದರ ಸಾಧಕ– ಬಾಧಕ ಕುರಿತು ಜನಾಭಿಪ್ರಾಯ ಸಂಗ್ರಹಿಸುತ್ತಿದೆ. ಪ್ರತಿ ತಾಲ್ಲೂಕು ಹಂತದಲ್ಲಿ ಸಮಾಜದ ಬೇರೆ ಬೇರೆ ಕ್ಷೇತ್ರದ ಜನರ ಸಲಹೆ, ಸೂಚನೆ ಪಡೆಯುತ್ತಿದೆ’ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದ ಶಿಕ್ಷಣ ಸಮನ್ವಯಾಧಿಕಾರಿ ಕೆ.ಸಿ. ವಸಂತ ಹೇಳಿದರು.

ಪಟ್ಟಣದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಡಯಟ್‌ನ ಹಿರಿಯ ಉಪನ್ಯಾಸಕ ಗಂಗಪ್ಪ ಮಾತನಾಡಿ, ರಾಷ್ಟ್ರದ ಹಿತದೃಷ್ಟಿಯಿಂದ ಹಾಗೂ ಮಕ್ಕಳ ಮನಸ್ಸನ್ನು ಅರಳಿಸುವ ಉದ್ದೇಶದಿಂದ ಉತ್ತಮ ಪಠ್ಯ ತಯಾರಿಸಬೇಕಾಗಿದೆ ಎಂದರು.

ಡಯಟ್‌ನ ಹಿರಿಯ ಉಪನ್ಯಾಸಕ ಪುರುಷೋತ್ತಮ್, ಬಿಆರ್‌ಸಿಗಳಾದ ಹುಮೇಗೌಡ, ನಾಗರಾಜ್, ಶೇಷಾದ್ರಿ, ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.