ಕೋಲಾರ: ‘ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 12ರಂದು ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಆರ್.ನಾಗರಾಜ್ ತಿಳಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಸುಸ್ಥಿರವಾಗಿರಬೇಕು. ಕುಟುಂಬಗಳಲ್ಲಿ ವ್ಯಾಜ್ಯಗಳಿದ್ದರೆ ಅನೇಕ ತೊಡುಕುಗಳಿಗೆ ಕಾರಣವಾಗುತ್ತದೆ. ಅದನ್ನು ಮಾತುಕತೆ ಮೂಲಕ ಬಗೆಹರಿಸಲು ಅದಾಲತ್ ನಡೆಸಲಾಗುತ್ತಿದೆ’ ಎಂದು ಹೇಳಿದರು.

‘ಸಮಾಜದಲ್ಲಿ ಶಾಂತಿ ನೆಲೆಸಲು ವ್ಯಾಜ್ಯಗಳು ಕಡಿಮೆಯಾಗಬೇಕು. ಜನರು ನೆಮ್ಮದಿಯ ಜೀವನ ನಡೆಸಬೇಕು. ಮನೆ, ಗ್ರಾಮ, ಜಿಲ್ಲೆ ಹಾಗೂ ರಾಜ್ಯ ವ್ಯಾಜ್ಯಗಳು ಕಡಿಮೆಯಾದರೆ ದೇಶ ಅಭಿವೃದ್ಧಿ ಹೊಂದುತ್ತದೆ. ನಾಗರಿಕರು ಕಾನೂನಿನ ಅರಿವು ಪಡೆದುಕೊಂಡರೆ ಕಾನೂನು ವ್ಯವಸ್ಥೆ ಸುಸ್ಥಿರವಾಗಿರುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ಲೋಕ ಅದಾಲತ್ನಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ರಾಜಿ ಆಗಬಹುದಾದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ, ಅಪಘಾತ, ಕಾರ್ಮಿಕರ ಪ್ರಕರಣ, ವಿದ್ಯುತ್ ಕಳವು, ಮರಳು ಕಳ್ಳತನ, ವೈವಾಹಿಕ ಪ್ರಕರಣ, ಸಿವಿಲ್ ಧಾವೆ, ಜನನ ಮತ್ತು ಮರಣ ನೋಂದಣಿ, ವ್ಯಾಜ್ಯ ಪೂರ್ವ ಪ್ರಕರಣಗಳಾದ ವಿದ್ಯುತ್, ನೀರು, ಬಿಎಸ್ಎನ್ಎಲ್ ಬಿಲ್ ಪಾವತಿ ಪ್ರಕರಣಗಳನ್ನು ರಾಜಿ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

‘ಕಕ್ಷಿದಾರರು ನ್ಯಾಯಾಲಯದಲ್ಲಿ ಬಾಕಿಯಿರುವ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದರೆ ಮುಂಚಿತವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು’ ಎಂದು ವಿವರಿಸಿದರು.

‘ಒಂದು ವೇಳೆ ಕಕ್ಷಿದಾರರು ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ರಾಜಿ ಕುರಿತು ತಿಳಿಸಬಹುದು ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಏರ್ಪಡಿಸಿರುವ ಪೂರ್ವ ಸಂಧಾನ ಬೈಠಕ್ನಲ್ಲಿ ಭಾಗವಹಿಸುವ ನ್ಯಾಯಾಧೀಶರು, ಸಂಧಾನಕಾರರ ಸಮಕ್ಷಮ ತಮ್ಮ ಪ್ರಕರಣಗಳ ಪೂರ್ವ ಸಂಧಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಇತ್ಯರ್ಥಪಡಿಸಿಕೊಳ್ಳಬಹುದು’ ಎಂದರು.

ಮೇಲ್ಮನವಿಗೆ ಅವಕಾಶವಿಲ್ಲ: ‘ಲೋಕ ಅದಾಲತ್ನಲ್ಲಿ ರಾಜಿಯಾದ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಎರಡೂ ಕಡೆಯ ಕಕ್ಷಿದಾರರು ನೆಮ್ಮದಿಯಿಂದ ಜೀವನ ಮಾಡಬಹುದು. ನ್ಯಾಯಾಲಯ ಶುಲ್ಕವನ್ನು ಸಹ ಕಕ್ಷಿದಾರರಿಗೆ ವಾಪಸ್ ನೀಡಲಾಗುವುದು. ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್ನ ಸದುಪಯೋಗ ಪಡೆಯಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀಧರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.