ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

7

ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

Published:
Updated:
Deccan Herald

ಕೋಲಾರ: ‘ರೇಷ್ಮೆ, ಹಾಲು ಹಾಗೂ ತರಕಾರಿ ಉತ್ಪಾದನೆಗೆ ಹೆಸರುವಾಸಿಯಾಗಿರುವ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಒತ್ತು ನೀಡುತ್ತೇನೆ’ ಎಂದು ನೂತನ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೇಳಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ‘ನೀರು ಸೇರಿದಂತೆ ಜಿಲ್ಲೆಯ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸುವ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕಾರ್ಯೋನ್ಮುಖನಾಗುತ್ತೇನೆ’ ಎಂದರು.

ಇದಕ್ಕೂ ಮುನ್ನ ಅವರು ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ಹಿಂದೆ ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಅವರನ್ನು ಸರ್ಕಾರ ಭಾನುವಾರ (ಜುಲೈ 29) ಜಿಲ್ಲೆಗೆ ವರ್ಗಾವಣೆ ಮಾಡಿತ್ತು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಉಪ ವಿಭಾಗಾಧಿಕಾರಿ ಶುಭಾ ಕಲ್ಯಾಣ್ ಹಾಜರಿದ್ದರು.

Tags: 

ಬರಹ ಇಷ್ಟವಾಯಿತೆ?

  • 4

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !