ಸೋಮವಾರ, ಜೂಲೈ 6, 2020
22 °C

ಮುನಿಸ್ವಾಮಿ ರಾಜೀನಾಮೆ ನೀಡಿ ಚುನಾವಣೆಗೆ ನಿಂತರೆ ಠೇವಣಿ ಬರುವುದಿಲ್ಲ: ಕಾಂಗ್ರೆಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಸಂಸದ ಎಸ್.ಮುನಿಸ್ವಾಮಿಯವರ ಸವಾಲನ್ನು ಕಾಂಗ್ರೆಸ್ ಪಕ್ಷ ಸ್ವೀಕರಿಸಿದೆ. ಅವರಿಗೆ ತಾಕತ್ತಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಶಾಸಕ ನಂಜೇಗೌಡರ ವಿರುದ್ಧ ಚುನಾವಣೆಗೆ ಸ್ಪರ್ಧಿಸಿದರೆ ಠೇವಣಿ ಕಳೆದುಕೊಳ್ಳುತ್ತಾರೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಪ್ರತಿ ಸವಾಲು ಹಾಕಿದರು.

ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಗಾಳಿಯಲ್ಲಿ ಗೆದ್ದು ಬಂದಿರುವ ಮುನಿಸ್ವಾಮಿ ಅವರು ವರ್ತನೆ ಬದಲಿಸಿಕೊಳ್ಳದಿದ್ದರೆ ಕ್ಷೇತ್ರದಿಂದ ಓಡಿಸುವುದು ಖಚಿತ’ ಎಂದು ವಾಗ್ದಾಳಿ ನಡೆಸಿದರು.

‘ಈ ಹಿಂದೆ ನಮ್ಮ ಪಕ್ಷದ ಮುಖಂಡರಲ್ಲಿನ ಭಿನ್ನಾಭಿಪ್ರಾಯದ ಕಾರಣಕ್ಕೆ ಮುನಿಸ್ವಾಮಿಯವರು ಗಾಳಿಯಲ್ಲಿ ಗೆದ್ದು ಬಂದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರು ಹಾಕಿರುವ ಸವಾಲು ಸ್ವೀಕರಿಸಿ ಚುನಾವಣಾ ಅಖಾಡಕ್ಕೆ ಸ್ವಾಗತಿಸುತ್ತೇವೆ. ಅವರು ರಾಜೀನಾಮೆ ಕೊಟ್ಟರೆ 6 ತಿಂಗಳಲ್ಲಿ ಉಪ ಚುನಾವಣೆ ನಡೆಯುತ್ತದೆ. ನಂಜೇಗೌಡರನ್ನು ಹೇಗೆ ಗೆಲ್ಲಿಸಬೇಕೆಂದು ನಮಗೆ ಗೊತ್ತಿದೆ’ ಎಂದು ಸವಾಲು ಹಾಕಿದರು.

‘ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ ₹ 20 ಲಕ್ಷ ಸಾವಿರ ಕೋಟಿ ಪ್ಯಾಕೇಜ್‌ನಿಂದ ರೈತರಿಗೆ ಯಾವುದೇ ಅನುಕೂಲವಿಲ್ಲ. ಕೇಂದ್ರವು ರೈತರಿಗೆ ಸಾಲ ನೀಡುವ ಮೂಲಕ ಮತ್ತೆ ಸಾಲಗಾರರಾಗಿ ಮಾಡುತ್ತಿದೆ. ರೈತರು ಬೆಳೆದಿರುವ ತರಕಾರಿಗಳಿಗೆ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರಕ್ಕೆ ರೈತರ ಬಗ್ಗೆ ಕಾಳಜಿಯಿದ್ದರೆ ತರಕಾರಿ ಹಾಗೂ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.