ಕೋಲಾರ: ‘ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಬಳಸುವ ಸಾಮಗ್ರಿಗಳ ಖರೀದಿ ಸಂಬಂಧ ರಾಜ್ಯದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ’ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಜಕೀಯ ಮಾಡಲು ಬೇರೆ ವಿಷಯ ಇಲ್ಲದಿರುವುದರಿಂದ ಈ ರೀತಿ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ’ ಎಂದು ಕಿಡಿಕಾರಿದರು.

‘ಸಿದ್ದರಾಮಯ್ಯ ಅವರು ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಯಾವುದೇ ದಾಖಲೆಪತ್ರವಿದ್ದರೆ ಬಿಡುಗಡೆ ಮಾಡಲಿ. ಬಾಯಿ ಚಪಲಕ್ಕೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನಾ ಸೋಂಕಿನ ಯುದ್ಧವನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ’ ಎಂದು ತಿಳಿಸಿದರು.

‘ಅಮೃತ್ ಸಿಟಿ ಯೋಜನೆಯಡಿ ಕೋಲಾರ ನಗರದಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಅವರ ನೇತೃತ್ವದಲ್ಲಿ ಜುಲೈ 7ರಂದು ಪರಿಶೀಲನೆ ನಡೆಸುತ್ತೇವೆ. ನಾನು ಮತ್ತು ಸ್ಥಳೀಯ ಶಾಸಕ ಕೆ.ಶ್ರೀನಿವಾಸಗೌಡರು ಹಾಜರಿರುತ್ತೇವೆ. ಕಾಮಗಾರಿ ಗುಣಮಟ್ಟ ಕಳಪೆ ಆಗಿರುವುದು ಕಂಡುಬಂದರೆ ಅದನ್ನು ಸರಿಪಡಿಸುವಂತೆ ಗುತ್ತಿಗೆದಾರರಿಗೆ ತಿಳಿಸುತ್ತೇವೆ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.