ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 15ರವರೆಗೆ ಮದ್ಯ ಮಾರಾಟವಿಲ್ಲ

Last Updated 28 ಏಪ್ರಿಲ್ 2020, 16:24 IST
ಅಕ್ಷರ ಗಾತ್ರ

ಕೋಲಾರ: ‘ರಾಜ್ಯದಲ್ಲಿ ಲಾಕ್‌ಡೌನ್‌ ಅಂತ್ಯಗೊಂಡ ಬಳಿಕ ಮೇ 3ರ ನಂತರವೂ ಮದ್ಯದಂಗಡಿ ತೆರೆಯುವುದು ಕಷ್ಟ ಸಾಧ್ಯ’ ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು.

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮೇ 3ರ ನಂತರ ಮದ್ಯದ ವಹಿವಾಟಿಗೆ ಅವಕಾಶ ನೀಡುವ ಚಿಂತನೆಯಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿಯವರು ಇದಕ್ಕೆ ಅನುಮತಿ ನೀಡದ ಕಾರಣ ಮೇ 15ರವರೆಗೂ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಕೊರೊನಾ ಸೋಂಕು ಪತ್ತೆಯಾಗದ ಹಸಿರು ವಲಯದ ಜಿಲ್ಲೆಗಳಲ್ಲೂ ಮದ್ಯದಂಗಡಿ ತೆರೆಯುವಂತಿಲ್ಲ. ಮದ್ಯ ವ್ಯಸನಿಗಳು ವೈದ್ಯರ ಬಳಿ ಸಲಹೆ ಮತ್ತು ಚಿಕಿತ್ಸೆ ಪಡೆಯಬೇಕು. ಇದು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT