ಶುಕ್ರವಾರ, ಮಾರ್ಚ್ 5, 2021
16 °C
ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಹೇಳಿಕೆ

ಆನಂದ್ ಸಿಂಗ್ ರಾಜೀನಾಮೆ ಪತ್ರ ತಲುಪಿಲ್ಲ: ಕೆ.ಆರ್.ರಮೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಜೀನಾಮೆ ಪತ್ರ ಕೂಡ ನನಗೆ ತಲುಪಿಲ್ಲ’ ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಭಾನುವಾರ ರಾತ್ರಿಯಿಂದ ನಾನು ಮನೆಯಲ್ಲಿಯೇ ಇದ್ದೇನೆ. ಯಾವುದೇ ರಾಜೀನಾಮೆ ಪತ್ರ ಬಂದಿಲ್ಲ. ಯಾರೇ ರಾಜೀನಾಮೆ ನೀಡಿದರೂ ಸ್ವೀಕರಿಸುತ್ತೇನೆ’ ಎಂದರು.

‘ಸರ್ಕಾರ ಇರುತ್ತದೆಯೋ ಉರುಳುತ್ತದೆಯೋ ಎನ್ನುವುದು ನನಗೆ ಸಂಬಂಧಿಸಿದ್ದಲ್ಲ. ಇನ್ನಷ್ಟು ಮಂದಿ ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವಿಷಯದ ಬಗ್ಗೆಯೂ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದು ಹೇಳಿದರು.

‘ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಮಾತನಾಡಿದರೆ ಅದಕ್ಕೆ ಬೇರೆ ಅರ್ಥ ಕಲ್ಪಿಸಿ ಸುದ್ದಿ ಮಾಡುವಿರಿ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು