ಶುಕ್ರವಾರ, ಅಕ್ಟೋಬರ್ 23, 2020
21 °C

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ನಗರದ ವಕೀಲ ಜಿ.ವೆಂಕಟಾಚಲಪತಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಟಾಚಲಪತಿ, ‘ಪರಿಶಿಷ್ಟರು ಮೀಸಲು ಕ್ಷೇತ್ರಗಳಿಗೆ ಮಾತ್ರ ಸೀಮಿತರಾಗದೆ ಸಾಮಾನ್ಯ ಕ್ಷೇತ್ರಗಳಿಂದಲೂ ಸ್ಪರ್ಧಿಸಬೇಕೆಂಬ ಸಂದೇಶ ರವಾನಿಸುವ ಉದ್ದೇಶಕ್ಕೆ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೇನೆ’ ಎಂದು ಹೇಳಿದರು.

‘ಮೀಸಲು ಕ್ಷೇತ್ರಗಳಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಪರಿಶಿಷ್ಟ ನಿರುದ್ಯೋಗಿ ಯುವಕ ಯುವತಿಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ದಲಿತರ ಮೇಲೆ ದೌರ್ಜನ್ಯ, ಹಲ್ಲೆ ನಡೆದರೂ ಧ್ವನಿ ಎತ್ತುತ್ತಿಲ್ಲ. ಸಾಕಷ್ಟು ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ ಸಾಲ ಸೌಲಭ್ಯ ಕಲ್ಪಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ’ ಎಂದು ದೂರಿದರು.

‘ಕೂಲಿ ಕೆಲಸ ಮಾಡಲಾಗದೆ, ಅರ್ಹತೆಗೆ ತಕ್ಕ ಕೆಲಸ ಸಿಗದೆ ನಿರುದ್ಯೋಗಿ ಯುವಕ ಯುವತಿಯರು ಹತಾಶರಾಗಿದ್ದಾರೆ. ನಿರುದ್ಯೋಗಿಗಳ ಪರ ವಿಧಾನ ಪರಿಷತ್‌ನಲ್ಲಿ ಧ್ವನಿ ಎತ್ತಲು ಮತದಾರರು ನನ್ನನ್ನು ಬೆಂಬಲಿಸಬೇಕು. ವಿದ್ಯಾರ್ಥಿ ಹೋರಾಟಗಳಲ್ಲಿ ನನ್ನ ಜತೆ ಭಾಗಿಯಾಗಿದ್ದ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.