ಸೋಮವಾರ, ಆಗಸ್ಟ್ 2, 2021
26 °C

ಮುಖ್ಯಮಂತ್ರಿ ಗಾದಿಗೆ ಲಾಬಿ ಮಾಡಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ರಾಜ್ಯದಲ್ಲಿ ಯಡಿಯೂರಪ್ಪ ಅವರೇ ಮುಂದಿನ 3 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಅವರ ನೇತೃತ್ವದಲ್ಲಿ ನಾನು ಸಚಿವನಾಗಿ ಕೆಲಸ ಮಾಡುತ್ತೇನೆ’ ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ತಾಲ್ಲೂಕಿನ ವೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಲಾಬಿ ನಡೆಸಿಲ್ಲ. ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಸರ್ಕಾರಕ್ಕೆ ಅಪಾಯವೂ ಇಲ್ಲ’ ಎಂದು ತಿಳಿಸಿದರು.

‘ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್‌ಗಾಗಿ ಪಕ್ಷದಲ್ಲಿ ಪೈಪೋಟಿ ನಡೆಯುತ್ತಿದೆ. ಬಿಜೆಪಿಯಲ್ಲಿ 40 ಮಂದಿ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ಕೊಡಬೇಕು ಎಂದು ನಾನು ಹೊರಗೆ ಹೇಳುವುದಿಲ್ಲ. ಪಕ್ಷದ ಚೌಕಟ್ಟಿನಲ್ಲಿ ನನ್ನ ಅಭಿಪ್ರಾಯ ತಿಳಿಸುವೆ’ ಎಂದು ಸ್ಪಷ್ಟಪಡಿಸಿದರು.

‘ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಸಂಬಂಧ ಶನಿವಾರ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿರ್ಧಾರವಾಗಲಿದೆ. ಸರ್ಕಾರದ ವಿರುದ್ಧ ಉಮೇಶ್ ಕತ್ತಿ ಬೇಸರಗೊಂಡಿದ್ದಾರೆ ಎಂಬ ವಿಚಾರ ಮಾಧ್ಯಮಗಳ ಸೃಷ್ಟಿ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು