ಆಯಾ ತಾಲ್ಲೂಕು ತಹಶೀಲ್ದಾರ್‌ಗಳು ಜ.30ರಂದು ಅಧಿಕಾರಿಗಳ ಸಭೆ ನಡೆಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ದಿನಾಂಕ ಗೊತ್ತುಪಡಿಸಬೇಕು. ಜತೆಗೆ ಚುನಾವಣಾ ಕಾರ್ಯಕ್ಕೆ ಗೊತ್ತುಪಡಿಸಿದ ಸಿಬ್ಬಂದಿಗೆ ಆದೇಶ ಜಾರಿಗೊಳಿಸಬೇಕು. ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ನಿಯಮದಂತೆ ಪ್ರಥಮ ಸಭೆಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ಸಂಬಂಧ ನೋಟಿಸ್ ಜಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.