ಮಂಗಳವಾರ, ಮಾರ್ಚ್ 9, 2021
29 °C

ಕೋಲಾರ: ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 17 ಮಂದಿ ಗುಣಮುಖರಾಗಿ ಶುಕ್ರವಾರ ಮನೆಗೆ ಮರಳಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಇಳಿಕೆಯಾಗಿದೆ.

ಕೋಲಾರ ತಾಲ್ಲೂಕಿನ 12 ಮಂದಿ, ಮಾಲೂರು ತಾಲ್ಲೂಕಿನ 3 ಮಂದಿ, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ 8 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

ಕೋಲಾರ ತಾಲ್ಲೂಕಿನ 3, ಬಂಗಾರಪೇಟೆ, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ, ಕೆಜಿಎಫ್‌ ತಾಲ್ಲೂಕಿನ ಇಬ್ಬರಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು