ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶತಕದ ಗಡಿ ದಾಟಿದ ಸೋಂಕಿತರ ಸಂಖ್ಯೆ

Last Updated 20 ಸೆಪ್ಟೆಂಬರ್ 2020, 14:00 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಭಾನುವಾರ ಶತಕದ ಗಡಿ ದಾಟಿದ್ದು, 116 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 825ಕ್ಕೆ ಏರಿಕೆಯಾಗಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣ ಕೊಂಚ ಇಳಿಕೆಯಾಗಿದೆ. ಕಳೆದೊಂದು ವಾರಕ್ಕೆ ಹೋಲಿಸಿದರೆ ಸೋಂಕು ಹರಡುವಿಕೆ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ.

ವಿಷಮ ಶೀತ ಜ್ವರವಿರುವ 78 ಮಂದಿಗೆ, ಸೋಂಕಿತರ ಸಂಪರ್ಕದಿಂದ 35 ಮಂದಿಗೆ ಸೋಂಕು ತಗುಲಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 41 ಮಂದಿಗೆ ಸೋಂಕು ಹರಡಿದೆ. ವಿಷಮ ಶೀತ ಜ್ವರಪೀಡಿತ 24 ಮಂದಿಗೆ, ಸೋಂಕಿತರ ಸಂಪರ್ಕದಿಂದ 14 ಮಂದಿಗೆ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿರುವ 3 ಮಂದಿಗೆ ಸೋಂಕು ಬಂದಿದೆ.

ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 21 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ, ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 11 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಹರಡಿರುವುದು ಖಚಿತವಾಗಿದೆ.

ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 11 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 13 ಮಂದಿಗೆ, ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 7 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಸೋಂಕು ಹರಡಿದೆ.

ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 4 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ತಗುಲಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT