ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರದಲ್ಲಿ ಶತಕದ ಗಡಿ ದಾಟಿದ ಸೋಂಕಿತರ ಸಂಖ್ಯೆ

Last Updated 30 ಸೆಪ್ಟೆಂಬರ್ 2020, 14:05 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಬುಧವಾರ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.

ಇದರ ಬೆನ್ನಲ್ಲೇ ಇಬ್ಬರು ಸೋಂಕಿತರು ಬುಧವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. 102 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,056ಕ್ಕೆ ಜಿಗಿದಿದೆ.

ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾದವರ ಸಂಖ್ಯೆ ಕೊಂಚ ತಗ್ಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 73 ಮಂದಿ ಗುಣಮುಖರಾಗಿ ಮನೆಗೆ ಮರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT