ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶತಕದ ಗಡಿ ದಾಟಿದ ಸೋಂಕಿತರ ಸಂಖ್ಯೆ

Last Updated 6 ಸೆಪ್ಟೆಂಬರ್ 2020, 15:02 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 770ಕ್ಕೆ ಏರಿಕೆಯಾಗಿದೆ.

ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ವಿಷಮ ಶೀತ ಜ್ವರವಿರುವ 85 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 14 ಮಂದಿಗೆ ಸೋಂಕು ಹರಡಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 35 ಮಂದಿಗೆ ಸೋಂಕು ತಗುಲಿದೆ. ವಿಷಮ ಶೀತ ಜ್ವರಪೀಡಿತ 24 ಮಂದಿಗೆ, ಸೋಂಕಿತರ ಸಂಪರ್ಕದಿಂದ 9 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಇಬ್ಬರಿಗೆ ಸೋಂಕು ಬಂದಿರುವುದು ಗೊತ್ತಾಗಿದೆ.

ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 30 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ, ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಇಬ್ಬರಿಗೆ ಹಾಗೂ ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ ಸೋಂಕು ಹರಡಿದೆ.

ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 7 ಮಂದಿಗೆ, ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಹಾಗೂ ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ, ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 4 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಸೋಂಕು ತಗುಲಿದೆ.

ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 18 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಸೋಂಕು ಬಂದಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸುರಕ್ಷತಾ ಕ್ರಮವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

45 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾಗಿರುವ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣ ತುಂಬಾ ಕಡಿಮೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 45 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಭಾನುವಾರ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 17 ಮಂದಿ, ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು, ಬಂಗಾರಪೇಟೆ ತಾಲ್ಲೂಕಿನ 6, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 10 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT