ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೂರು: ವಿದ್ಯುತ್ ಅಡಚಣೆಗೆ ಆಕ್ಷೇಪ

Last Updated 19 ಸೆಪ್ಟೆಂಬರ್ 2020, 3:03 IST
ಅಕ್ಷರ ಗಾತ್ರ

ಮಾಲೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜೀವನಾಧಾರಿತಧಾರಾವಾಹಿ ಶನಿವಾರ ಮತ್ತು ಭಾನುವಾರ ಸಂಜೆ 6 ರಿಂದ 7 ರ ತನಕ ಪ್ರಸಾರವಾಗುತ್ತಿದ್ದು, ಈ ಸಮಯದಲ್ಲಿ ವಿದ್ಯುತ್ಅಡಚಣೆ ಖಂಡಿಸಿ ದಲಿತ ಸಿಂಹ ಸೇನೆ ಕರ್ನಾಟಕ ಸಂಘಟನೆಯ ಸದಸ್ಯರುಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ತಿಪ್ಪಸಂದ್ರ ಶ್ರೀನಿವಾಸ್ ಮಾತನಾಡಿ, ‘ಇತ್ತೀಚೆಗೆ ಕೆಲವು ಮನುವಾದಿಗಳು ಮತ್ತು ಪಟ್ಟಬಧ್ರ ಹಿತಾಸಕ್ತಿಗಳುಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ ಹಾಕಿರುವುದು ರಾಜ್ಯ ಸರ್ಕಾರಕ್ಕೆ ಗೊತ್ತಿರುವ ವಿಚಾರ. ಆದರೆ, ಮಾಲೂರು ಬೆಸ್ಕಾಂ ಇಲಾಖೆ ಶನಿವಾರ ಮತ್ತು ಭಾನುವಾರ ಸಂಜೆ 6-7 ರ ತನಕ ಉದ್ದೇಶ ಪೂರ್ವಕವಾಗಿ ವಿದ್ಯುತ್‌ ಕಡಿತಗೊಳಿಸುತ್ತಿರುವುದು ನೋವಿನ ಸಂಗತಿ’ ಎಂದು ಆರೋಪಿಸಿದರು.

ಕೋವಿಡ್-19ನಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಶಿಕ್ಷಣ ನೀಡುತ್ತಿದ್ದು, ವಿದ್ಯುತ್ ಕಡಿತಗೊಳಿಸುತ್ತಿರುವುದರಿಂದ ತಾಲ್ಲೂಕಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹಾಗಾಗಿ ಸಂಜೆ ವಿದ್ಯುತ್ ಕಡಿತಗೊಳಿಸುತ್ತಿರುವ ಸಿಬ್ಬಂದಿಯ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಸಂಘಟನೆಯಿಂದ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲ್ಲೂಕು ಅಧ್ಯಕ್ಷ ದೊಡ್ಡ ಕಲ್ಲಹಳ್ಳಿ ವೆಂಕಟೇಶ್, ಉಪಾಧ್ಯಕ್ಷ ಎಟ್ಟಕೋಡಿ ಸಂತೋಷ್, ಜಿಲ್ಲಾ ಯುವಘಟಕದ ಅಧ್ಯಕ್ಷ ಸುಭಾಶ್, ಮುಖಂಡರಾದ ಗುಂಡೂರು ಮಂಜುನಾಥ್, ಮಾರಪ್ಪ, ಚೆನ್ನರಾಯಪ್ಪ, ಕಾಂತರಾಜ್, ಮಂಜು, ಸಂದೀಪ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT