ಕೋಲಾರ: ಜಿಲ್ಲೆಯ ರೈತರು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆ ಸಮೀಕ್ಷೆ ಮಾಡಬಹುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ನನ್ನ ಬೆಳೆ ನನ್ನ ಹಕ್ಕು’ ಘೋಷ ವಾಕ್ಯದೊಂದಿಗೆ 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ರೈತರು ತಮ್ಮ ಜಮೀನುಗಳ ಸರ್ವೆ ನಂಬರ್, ಹಿಸ್ಸಾ ನಂಬರ್ಗಳಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಹಾಗೂ ಇತರೆ ಬೆಳೆಗಳ ವಿವರವನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ನಮೂದಿಸಬಹುದು ಎಂದು ಹೇಳಿದ್ದಾರೆ.

ಕಂದಾಯ, ಕೃಷಿ, ರೇಷ್ಮೆ ಇಲಾಖೆ ಅಧಿಕಾರಿಗಳು ಅಥವಾ ಸಿಬ್ಬಂದಿ ನೆರವಿನಿಂದ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು. ಬೆಳೆ ವಿಸ್ತೀರ್ಣ ಲೆಕ್ಕ ಹಾಕಲು, ಬೆಳೆ ಹಾನಿ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮೆ, ಬೆಂಬಲ ಬೆಲೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಲ್ಲಿ ಫಲಾನುಭವಿ ಆಧಾರಿತ ಯೋಜನೆಗಳಲ್ಲಿ, ಆರ್ಟಿಸಿಯಲ್ಲಿ ಬೆಳೆ ವಿವರ ದಾಖಲಿಸಲು, ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ವರದಿ ಸಿದ್ಧಪಡಿಸಲು ಬೆಳೆ ಸಮೀಕ್ಷೆ ಮಾಹಿತಿ ಬಳಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಬೆಳೆ ಸಮೀಕ್ಷೆ 2021–22ರ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ರೈತರು ಹತ್ತಿರದ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳು ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಲಾಗಿರುವ ಖಾಸಗಿ ನಿವಾಸಿಗಳನ್ನು ಸಂರ್ಪಕಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.