ಭಾನುವಾರ, ಮೇ 22, 2022
22 °C

ಕೋಲಾರ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ವತಿಯಿಂದ ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರು-ಗ್ರೇಡ್2 ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿಯ ಕರಡನ್ನು ಇಲಾಖೆಯ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದರೆ ನ.24ರೊಳಗೆ ಸಲ್ಲಿಸಬೇಕು ಎಂದು ಡಿಡಿಪಿಐ ರೇವಣ್ಣ ಸಿದ್ದಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಶಿಕ್ಷಕರು ಪೂರಕ ದಾಖಲೆಪತ್ರಗಳೊಂದಿಗೆ ಆಯಾ ಜಿಲ್ಲಾ ಉಪ ನಿರ್ದೇಶಕರಿಗೆ ಕಚೇರಿಗೆ ನಿಗಧಿತ ಅವಧಿಯೊಳಗೆ ಆಕ್ಷೇಪಣೆ ಸಲ್ಲಿಸಬಹುದು. ಆಕ್ಷೇಪಣೆಗಳ ಬಗ್ಗೆ ಉಪ ನಿರ್ದೇಶಕರು ಪರಿಶೀಲಿಸಿ ಕರಡು ಪ್ರತಿಯನ್ನು ದೃಢೀಕರಿಸಿ, ಪೂರಕ ದೃಢೀಕೃತ ದಾಖಲೆಗಳೊಂದಿಗೆ ಇಲಾಖೆ ಸಹ ನಿರ್ದೇಶಕರಿಗೆ ಡಿ.2ರೊಳಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಉಪ ನಿರ್ದೇಶಕರು ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಕಾರ್ಯ ನಿರ್ವಾಹಕರ ಸಹಯೋಗದೊಂದಿಗೆ ನಿಯಮಾನುಸಾರ ಸರಿಪಡಿಸಬೇಕು, ಅಗತ್ಯವಿದ್ದರೆ ನಿಯಮಗಳನ್ನು ಉಲ್ಲೇಖಿಸಿ ಅರ್ಜಿದಾರರಿಗೆ ಹಿಂಬರಹ ನೀಡಬೇಕು. ಪುನಃ ಯಾವುದೇ ಗೊಂದಲ ನ್ಯೂನತೆ ಕಂಡುಬಂದರೆ ಸಂಬಂಧಿತ ಅಧಿಕಾರಿ ಅಥವಾ ಸಿಬ್ಬಂದಿಯನ್ನೇ ಹೊಣೆಗಾರರಾಗಿ ಮಾಡುತ್ತೇವೆ ಇಲಾಖೆ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.