ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಮುಳಬಾಗಿಲು: "ವಿದ್ಯುತ್‌ ಕ್ಷೇತ್ರ ಖಾಸಗೀಕರಣಕ್ಕೆ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಳಬಾಗಿಲು: ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ವಿದ್ಯುತ್ ಕಾಯ್ದೆ ಮಂಡಿಸಬಾರದು. ರೈತರ ಪಂಪ್‌ಸೆಟ್‌ಗಳಿಗೆ ಪ್ರಿಪೇಯ್ಡ್ ಮೀಟರ್ ಅಳವಡಿಕೆ ನಿರ್ಧಾರ ಕೈಬಿಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಆ. 9ರಂದು ಮೋಟಾರ್, ಪಂಪ್‌ಗಳ ಸಮೇತ ಕೋಲಾರದ ರೈಲ್ವೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ತಾಲ್ಲೂಕಿನ ಕಸಬಾ ಹೋಬಳಿ ಎನ್. ವಡ್ಡಹಳ್ಳಿ ಮಾರುಕಟ್ಟೆಯಲ್ಲಿ ಬುಧವಾರ ನಡೆದ ಸಾಮೂಹಿಕ ನಾಯಕತ್ವದ ರೈತ ಸಂಘದ ಸಭೆಯಲ್ಲಿ ನಿರ್ಧರಿಸಲಾಯಿತು.

ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ರೈತ ಕುಲವನ್ನು ಸರ್ವನಾಶ ಮಾಡಲು ಪಣತೊಟ್ಟಿದೆ. ಜನಾಭಿಪ್ರಾಯವಿಲ್ಲದೆ ಕಾಯ್ದೆಗಳನ್ನು ಜಾರಿಗೆ ತರುವ ಮುಖಾಂತರ ಕೃಷಿ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿದೆ. ದೇಶದ ಬಡವರಿಗೆ ಆಹಾರ ಕೊಡದೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಸರ್ಕಾರ ಮಾಡುತ್ತಿದೆ ಎಂದು
ಆರೋಪಿಸಿದರು.

ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್ ಮಾತನಾಡಿದರು.

ಸಭೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಫಾರೂಕ್‌ ಪಾಷಾ, ಜಿಲ್ಲಾ ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜ್‌ ಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಮೇಲಗಾಣಿ ವಿಜಯ್‌, ಹೆಬ್ಬಣಿ ಆನಂದರೆಡ್ಡಿ, ಯುವ ಮುಖಂಡ ನಂಗಲಿ ಕಿಶೋರ್, ಧರ್ಮ, ಪೊಂಬರಹಳ್ಳಿ ನವೀನ್, ವೇಣು, ಕೇಶವ, ಅಣ್ಣಿಹಳ್ಳಿ ನಾಗರಾಜ್, ವೆಂಕಟರವಣಪ್ಪ, ಸುಪ್ರೀಂಚಲ, ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಕಿರಣ್, ಚಾಂದ್‌ಪಾಷಾ, ಸಾಗರ್, ಕೋಲಾರ ತಾಲ್ಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಲಾಯರ್ ಮಣಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.