ವ್ಯಕ್ತಿಗಿಂತ ಪಕ್ಷ ದೊಡ್ಡದು

ಶುಕ್ರವಾರ, ಏಪ್ರಿಲ್ 19, 2019
30 °C

ವ್ಯಕ್ತಿಗಿಂತ ಪಕ್ಷ ದೊಡ್ಡದು

Published:
Updated:

ಕೋಲಾರ: ‘ಕಾಂಗ್ರೆಸ್‌ನಲ್ಲಿ ವ್ಯಕ್ತಿಗಿಂತ ಪಕ್ಷ ದೊಡ್ಡದು. ಇಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಪರೋಕ್ಷವಾಗಿ ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ಗೆ ಎಚ್ಚರಿಕೆ ನೀಡಿದರು.

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್‌ ಪಕ್ಷದಲ್ಲಿ ಯಾರಿಗೆ ಟಿಕೆಟ್‌ ಕೊಡುತ್ತಾರೊ ಅವರ ಪರ ಕೆಲಸ ಮಾಡಬೇಕು. ಅದು ಬಿಟ್ಟು ವೈಯಕ್ತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದರು.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ವಿರುದ್ಧ ಕೊತ್ತೂರು ಮಂಜುನಾಥ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಚಂದ್ರಾರೆಡ್ಡಿ, ‘ಪಕ್ಷದ ಹಿರಿಯ ನಾಯಕರ ಬಗ್ಗೆ ಮಾತನಾಡಿದರೆ ಭವಿಷ್ಯದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !