ಗುರುವಾರ , ಸೆಪ್ಟೆಂಬರ್ 23, 2021
20 °C

ಮಾಸ್ಕ್ ರಹಿತ ಚಾಲಕರಿಗೆ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಿವಾಸಪುರ: ಪಟ್ಟಣದಲ್ಲಿ ಬುಧವಾರ ಕಾರ್ಯಾಚರಣೆ ನಡೆಸಿದ ಪುರಸಭೆ ಅಧಿಕಾರಿಗಳು ಮಾಸ್ಕ್ ಧರಿಸದೆ ವಾಹನ ಚಾಲನೆ ಮಾಡುತ್ತಿದ್ದ ಚಾಲಕರಿಗೆ ದಂಡ ವಿಧಿಸಿದರು.

ಲಾಕ್‌ಡೌನ್ ಮುಗಿದ ಮೇಲೆ ಬಹುತೇಕ ವಾಹನ ಚಾಲಕರು ಹಾಗೂ ನಾಗರಿಕರು ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಸಂಚರಿಸುವುದು ಸಾಮಾನ್ಯ ದೃಶ್ಯವಾಗಿತ್ತು. ಕೋವಿಡ್ ನಿಯಂತ್ರಣಕ್ಕೆ ಸಂಕಲ್ಪ ಮಾಡಿರುವ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿದರು. ಮಾಸ್ಕ್ ಇಲ್ಲದ ವ್ಯಕ್ತಿಗಳಿಗೆ ₹ 200 ದಂಡ ಹಾಕಿದರು.

ಈ ಸಂದರ್ಭದಲ್ಲಿ ಕೆಲವು ಕಡೆ ಪುರಸಭೆ ಸಿಬ್ಬಂದಿ ಹಾಗೂ ಮಾಸ್ಕ್ ರಹಿತ ವಾಹನ ಚಾಲಕರ ನಡುವೆ ಮಾತಿನ ಚಕಮಕಿ ನಡೆಯಿತಾದರೂ, ಪೊಲೀಸ್ ಕ್ರಮಕ್ಕೆ ಹೆದರಿ ದಂಡ ನೀಡಿದರು. ದಂಡ ವಸೂಲಿ ಕಾರ್ಯಾಚರಣೆಯನ್ನು ದೂರದಿಂದ ಗಮನಿಸಿದ ಚಾಲಕರು ಹಿಂದಕ್ಕೆ ವಾಪಸ್ ಆಗುವ ದೃಶ್ಯ ಸಾಮಾನ್ಯವಾಗಿತ್ತು. ಇನ್ನು ಕೆಲವು ಚಾಲಕರು ತಮ್ಮ ವಾಹನಗಳನ್ನು ರಸ್ತೆಬದಿಯಲ್ಲಿ ನಿಲ್ಲಿಸಿ ಮಾಸ್ಕ್ ಖರೀದಿಸಿ ಧರಿಸಿದರು.

ಪುರಸಭೆ ಆರೋಗ್ಯ ನಿರೀಕ್ಷಕ ಎಂ. ಪೃಥ್ವಿರಾಜ್ ದಂಡ ವಿಧಿಸುವುದರ ಜತೆಗೆ, ಕೋವಿಡ್ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕಾದ ಅಗತ್ಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಪರಿಸರ ಎಂಜಿನಿಯರ್‌ ಡಿ. ಶೇಖರ್ ರೆಡ್ಡಿ, ಕಂದಾಯ ನಿರೀಕ್ಷಕರಾದ ನಾಗರಾಜ್, ಶಂಕರ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.