ಗುರುವಾರ , ನವೆಂಬರ್ 26, 2020
20 °C

‘ಪ್ರಗತಿಗೆ ಭ್ರಷ್ಟಾಚಾರ ಅಡ್ಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೌರಿಬಿದನೂರು: ‘ಭ್ರಷ್ಟಾಚಾರದ ನಿರ್ಮೂಲನೆಗಾಗಿ ತಾಲ್ಲೂಕಿನ ಎಲ್ಲ ಅಧಿಕಾರಿಗಳು ಮುಂದಾಗಬೇಕು’ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರಾದ ಆರ್. ಪವಿತ್ರಾ ಮನವಿ ಮಾಡಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ನಗರದ ನ್ಯಾಯಾಲಯ ಆವರಣದಲ್ಲಿ ಆಯೋಜಿಸಿದ್ದ ‘ಭ್ರಷ್ಟಾಚಾರ ನಿರ್ಮೂಲನೆ’ ಕೇಂದ್ರದ ವಿಚಕ್ಷಣದಳ ವತಿಯಿಂದ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಸಹಾಯಕ ಅಭಿಯೋಜಕ ಆದಿನಾರಾಯಣಪ್ಪ, ಭ್ರಷ್ಟಾಚಾರ ಈ ದೇಶದ ದೊಡ್ಡ ಪಿಡುಗು ಎಂದರು.

ವಕೀಲ ಸಂಘದ ಆಧ್ಯಕ್ಷ ವಿ.ಸಿ.ಗಂಗಯ್ಯ ಮಾತನಾಡಿ,  ಎಲ್ಲ ಕಚೇರಿಗಳಲ್ಲಿ ಭ್ರಷ್ಟಾಚಾರದ ಬಗ್ಗೆ ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ಹಾಕಬೇಕು ಎಂದರು.

ಉಪ ತಹಶೀಲ್ದಾರ್ ಆಶಾ, ವಕೀಲರ ಸಂಘದ ಉಪಾಧ್ಯಕ್ಷ ಎನ್.ಆರ್. ಧನಂಜಯ್, ವಕೀಲರಾದ ವಿ.ಗೋಪಾಲ್, ನಾಗರಾಜು, ಕೆ.ಲಕ್ಷ್ಮಿನಾರಾಯಣ್, ಜಗದೀಶ್, ರಾಮಚಂದ್ರ, ಕೋಮಲಾ, ನ್ಯಾಯಾಲಯ ಸಿಬ್ಬಂದಿ ಶ್ರೀನಾಥ್, ಸಂಧ್ಯಾ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.