ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ತಡೆಗೆ ಜನರು ಸಹಕರಿಸಿ

Last Updated 15 ಮೇ 2021, 13:40 IST
ಅಕ್ಷರ ಗಾತ್ರ

ಕೋಲಾರ: ‘ಕೋವಿಡ್‌ 2ನೇ ಅಲೆಯಿಂದ ದೇಶದೆಲ್ಲೆಡೆ ಸಾವಿನ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ಮಹಾಮಾರಿ ತೊಲಗಿಸಲು ಜನರು ಸಹಕಾರ ನೀಡದಿದ್ದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಪ್ರಯೋಜನವಿಲ್ಲ’ ಎಂದು ಮನ್ವಂತರ ಪ್ರಕಾಶನದ ಸಂಚಾಲಕ ಎಸ್.ಮಂಜುನಾಥ್ ಅಭಿಪ್ರಾಯಪಟ್ಟರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಮನ್ವಂತರ ಜನಸೇವಾ ಟ್ರಸ್ಟ್ ಮತ್ತು ಮನ್ವಂತರ ಪ್ರಕಾಶನದ ಸಹಯೋಗದಲ್ಲಿ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಡ ಜನರಿಗೆ ತರಕಾರಿ ವಿತರಿಸಿ ಮಾತನಾಡಿ, ‘ಕಳೆದ ವರ್ಷಕ್ಕಿಂತ ಈ ಬಾರಿ ಜನರು ಲಾಕ್‌ಡೌನ್‌ನಿಂದ ಹೆಚ್ಚಿನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ದಾನಿಗಳು ಬಡವರ ನೆರವಿಗೆ ಧಾವಿಸಬೇಕು’ ಎಂದು ಮನವಿ ಮಾಡಿದರು.

‘ಸಂಘಟನೆಯಿಂದ ಹಿಂದಿನ ವರ್ಷ ಲಾಕ್‌ಡೌನ್‌ ಸಂದರ್ಭದಲ್ಲಿ ಬಡ ಜನರಿಗೆ ತರಕಾರಿ, ದಿನಸಿ, ಮಾಸ್ಕ್, ಸ್ಯಾನಿಟೈಸರ್, ಸೋಪು ನೀಡಲಾಗಿತ್ತು. ಈ ಬಾರಿಯೂ ಜನರ ಸೇವೆ ಮುಂದುವರಿಸಿದ್ದೇವೆ. ಕೋವಿಡ್‌ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೂ ಜನ ಎಚ್ಚರಿಕೆಯಿಂದ ಇರಬೇಕು. ಅನಗತ್ಯ ಓಡಾಟದಿಂದ ಸೋಂಕು ಹೆಚ್ಚುತ್ತದೆ’ ಎಂದು ಹೇಳಿದರು.

‘ನಗರ, ಪಟ್ಟಣದಿಂದ ಹಳ್ಳಿಗಳಿಗೆ ಸೋಂಕು ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ಜನರ ಮೇಲಿದೆ. ಕೋವಿಡ್‌ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಸೋಂಕಿನ ನಿಯಂತ್ರಣಕ್ಕೆ ಜನರು ಸಹಕರಿಸದಿದ್ದರೆ ಶಾಶ್ವತವಾಗಿ ಲಾಕ್‌ಡೌನ್’ ಆಗಬೇಕಾಗುತ್ತದೆ ಎಂದರು.

ಸರ್ಕಾರ ಸ್ಪಂದಿಸಬೇಕು: ‘ಕೋವಿಡ್‌ ಮತ್ತು ಲಾಕ್‌ಡೌನ್‌ನಿಂದ ಬಡ ಜನರ ಬದುಕು ಬೀದಿಗೆ ಬರುವಂತಾಗಿದೆ. ಆಯಾ ದಿನ ಕೂಲಿ ಮಾಡಿ ಜೀವನ ಸಾಗಿಸುತ್ತಿರುವವರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಮತ್ತು ಉಳ್ಳವರು ನೆರವಿಗೆ ನಿಲ್ಲಬೇಕು’ ಎಂದು ಮನ್ವಂತರ ಜನಸೇವಾ ಟ್ರಸ್ಟ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಕೋರಿದರು.

‘ಎಲ್ಲವೂ ಸರ್ಕಾರದಿಂದಲೇ ಆಗಬೇಕೆಂಬ ಧೋರಣೆ ಬದಿಗಿಟ್ಟು ಜನ ತಮ್ಮ ಆರೋಗ್ಯದ ಕಡೆ ಗಮನ ಹರಿಸಬೇಕು. ಜನರು ಕೋವಿಡ್‌ ವಿಚಾರದಲ್ಲಿ ಉದಾಸೀನ ಮಾಡಿ ಜೀವ ಕಳೆದುಕೊಳ್ಳಬಾರದು’ ಎಂದು ಮನ್ವಂತರ ಪ್ರಕಾಶನದ ಸಂಸ್ಥಾಪಕ ಕಾರ್ಯದರ್ಶಿ ಪಾ.ಶ್ರೀ.ಅನಂತರಾಮ್ ಹೇಳಿದರು.

ಸಂಸ್ಥೆಯ ಖಜಾಂಚಿ ಎಸ್.ಎನ್.ಪ್ರಕಾಶ್, ಸದಸ್ಯರಾದ ಎಂ.ಸಂತೋಷ್, ಎಸ್.ಹರೀಶ್, ಎಂ.ಶ್ರೀನಿವಾಸ್, ರಾಮಮೂರ್ತಿ, ಎಂ.ಗಣೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT