ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಕೋವಿಡ್ ಹಾಗೂ ಓಮೈಕ್ರಾನ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿದೆ. ಜಿಲ್ಲೆಯಲ್ಲಿ ಕರ್ಫ್ಯೂ ಅವಧಿಯಲ್ಲಿ ದೈನಂದಿನ ಅಗತ್ಯ ವಸ್ತುಗಳ ಖರೀದಿ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅವಕಾಶವಿದ್ದು, ಜನರು ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸೂಚಿಸಿದರು.